Advertisement
ಪಟ್ಟಣದ ತಾಲೂಕು ಕಚೇರಿಗೆ ತಾಲೂಕಿನ ವಿವಿಧ ಹಳ್ಳಿಗಳಿಂದ ಸಹಸ್ರಾರು ಜನರು ತಮ್ಮ ಕೆಲಸ ಕಾರ್ಯ ನಿಮಿತ್ತ ಆಗಮಿಸುವವರಿಗೆ ಹಾಗೂ ಕೂಲಿ, ಕಾರ್ಮಿಕರಿಗೆ ಸಾರ್ವಜನಿಕರಿಗೆ ಅನು ಕೂಲವಾಗಲಿ ಎಂಬ ನಿಟ್ಟಿನಲ್ಲಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಮಹತ್ವಕಾಂಕ್ಷೆಯ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ವಿಪರ್ಯಾಸ ಎಂದರೆ ಕ್ಯಾಂಟೀನ್ ಕೆಲಸ ಪ್ರಾರಂಭವಾಗಿ 5 ತಿಂಗಳು ಕಳೆದರೂ ಗುತ್ತಿಗೆದಾರರ ನಿರ್ಲಕ್ಷ್ಯ ದಿಂದಾಗಿ ಇನ್ನೂ ಪೂರ್ಣಗೊಂಡಿಲ್ಲದಿರುವುದು ಸಾರ್ವಜನಿ ಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಕ್ಯಾಂಟೀನ್ ಉದ್ಘಾಟನೆ ಯಾವಾಗ ಎಂಬು ವುದರ ನಿರೀಕ್ಷೆಯಲ್ಲಿ ಬಡವರು, ಕೂಲಿ ಕಾರ್ಮಿಕರು, ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.
Related Articles
Advertisement
ಹಾಳಾಗುತ್ತಿರುವ ವಸ್ತುಗಳು: ವಿಪರ್ಯಾಸ ಎಂದರೆ ಕ್ಯಾಂಟೀನ್‌ಗೆ ಬಂದಿರುವ ಅನೇಕ ವಸ್ತುಗಳು, ಸಾಮಗ್ರಿಗಳು ಹಲವು ತಿಂಗಳಿನಿಂದ ಧೂಳು ಹಿಡಿಯುತ್ತಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾಳಾಗಿ ಹೋಗುತ್ತಿದ್ದರೂ ಸಂಬಂಧಪಟ್ಟವರು ಕಣ್ಮುಚ್ಚಿ ಕುಳಿತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ಮುಗಿದು ಹೊಸ ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬಂದು ಆರು ತಿಂಗಳು ಗತಿಸಿದರೂ ಕಾಮಗಾರಿಗೆ ಮುಕ್ತಿ ಸಿಕ್ಕಿಲ್ಲ. ಇನ್ನಾದ್ರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಯೋಜನಾಧಿಕಾರಿಗಳು ಇಂದಿರಾ ಕ್ಯಾಂಟೀನ್ ಗೆ ಉದ್ಘಾಟನೆ ಭಾಗ್ಯ ತಂದುಕೊಡ್ತರಾ ಎಂಬುದನ್ನು ಕಾದು ನೋಡಬೇಕಿದೆ.
ಗುಡಿಬಂಡೆ ಪಟ್ಟಣದ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾರ್ಯ ವಿಳಂಬವಾಗಿದೆ. ಪಟ್ಟಣ ಪಂಚಾಯಿತಿ ವತಿಯಿಂದ ಕಾಂಪೌಂಡ್ ನಿರ್ಮಾಣ ಮತ್ತು ಸಿಸಿಟಿವಿ ಅಳವಡಿಕೆ ಕಾಮಗಾರಿ ನಡೆಯಬೇಕಿದ್ದು, ಟೆಂಡರ್ ಕರೆಯಲಾಗಿದೆ. ಗುತ್ತಿಗೆದಾರರಿಗೆ ಆದೇಶ ವರ್ಕ್ ಆರ್ಡರ್ ನೀಡಬೇಕಿದೆ.ನಾಗರಾಜ್, ಪಪಂ ಮುಖ್ಯಧಿಕಾರಿ ಗುಡಿಬಂಡೆ ಇಂದಿರಾ ಕ್ಯಾಂಟೀನ್ ಕಾಮಗಾರಿ ಆರಂಭಗೊಂಡು ಐದು ತಿಂಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಸಂಬಂಧಪಟ್ಟ
ಅಧಿಕಾರಿಗಳು, ಜನಪ್ರತಿನಿಧಿಗಳು ಕಂಡು ಕಾಣದಂತೆ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
ನವೀನ್ ಗರುಡಾಚಾರ‌್ಲಹಳ್ಳಿ, ಕರವೇ, ತಾಲೂಕು ಅಧ್ಯಕ್ಷ ಗುಡಿಬಂಡೆ