Advertisement
ಊಟ-ಉಪಾಹಾರಕ್ಕಾಗಿ ಕ್ಯಾಂಟೀನ್‌ಗೆ ಪ್ರತಿದಿನ ನೂರಾರು ಮಂದಿ ಬರುತ್ತಿದ್ದು, ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟಕ್ಕಾಗಿ ಜನರು ಹೊರಗಡೆ ಕಾಯಬೇಕಾಗುತ್ತದೆ. ಆದರೆ ಹೊರ ಭಾಗದಲ್ಲಿ ಮಳೆಯಿಂದ ರಕ್ಷಿಸಿಕೊಳ್ಳಲು ಯಾವುದೇ ವ್ಯವಸ್ಥೆಗಳಿಲ್ಲದ ಕಾರಣ ಗ್ರಾಹಕರು ಕೊಡೆ ಹಿಡಿದುಕೊಂಡು, ಮಳೆಯಲ್ಲಿ ತೋಯ್ದುಕೊಂಡು ನಿಲ್ಲಬೇಕಾದ ಅನಿವಾರ್ಯತೆ ಇದೆ. ಹೊರ ಭಾಗದ ಸುತ್ತಲೂ ನೀರು ನಿಂತು ಸೊಳ್ಳೆಗಳ ಉತ್ಪಾದನ ಕೇಂದ್ರವಾಗುತ್ತಿದೆ.
ಕ್ಯಾಂಟೀನ್ ಸುತ್ತಲೂ ಅಳವಡಿಸ ಲಾಗಿರುವ ಇಂಟರ್ ಲಾಕ್‌ನಲ್ಲಿ ಸರಿಯಾಗಿ ಮಳೆ ನೀರು ಹರಿದು ಹೋಗುತ್ತಿಲ್ಲ. ಇದರಿಂದಾಗಿ ಅಲ್ಲಲ್ಲಿ ಮಳೆ ನೀರು ನಿಂತು ಸೊಳ್ಳೆ ಉತ್ಪಾದನ ಕೇಂದ್ರವಾಗಿ ಮಾರ್ಪಾಡುಗೊಂಡಿದೆ. ಕ್ಯಾಂಟೀನ್ ತ್ಯಾಜ್ಯ ಸಂಗ್ರಹ ಪೈಪ್ ಬಳಿ ಅಳವಡಿಸಲಾಗಿದ್ದ ಇಂಟರ್‌ಲಾಕ್ ತೆರವುಗೊಳಿಸಿರುವುದರಿಂದ ಅಲ್ಲಿ ಗುಂಡಿ ನಿರ್ಮಾಣವಾಗಿದ್ದು, ಅದರಲ್ಲಿ ಮಳೆನೀರು ತುಂಬಿ ಕೊಂಡಿದೆ. ಕ್ಯಾಂಟೀನ್ ಸುತ್ತ ನೀರು ಹರಿದು ಹೋಗಲು ವ್ಯವಸ್ಥೆಯಿಲ್ಲದ ಕಾರಣ ನೀರು ನಿಂತುಕೊಂಡು ಸೊಳ್ಳೆಗಳ ಉತ್ಪತ್ತಿಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ.
Related Articles
ಛಾವಣಿ ನಿರ್ಮಿಸಲು ಬೇಡಿಕೆ ಬಂದಿದೆ
ಇಂದಿರಾ ಕ್ಯಾಂಟೀನ್ ಹೊರಭಾಗದಲ್ಲಿ ಛಾವಣಿ ನಿರ್ಮಿಸಬೇಕೆಂಬ ಬೇಡಿಕೆ ಸಾರ್ವಜನಿಕರ ಕಡೆಯಿಂದ ಬಂದಿದೆ. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾ ಗುವುದು. ಹೊರಭಾಗದಲ್ಲಿ ನೀರು ನಿಲ್ಲದಂತೆ ಹಾಗೂ ಡ್ರೈನೇಜ್‌ನ ಸಮಸ್ಯೆಗೆ ಕ್ರಮ ಕೈಗೊಳ್ಳಲಾಗುವುದು.
– ರೂಪಾ ಟಿ. ಶೆಟ್ಟಿ, ಪೌರಾಯುಕ್ತೆ, ನಗರಸಭೆ, ಪುತ್ತೂರು
Advertisement