Advertisement

ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ ಇಂದಿರಾ ಕ್ಯಾಂಟೀನ್‌ಗೆ ಜಾಗ

07:22 AM Oct 24, 2017 | |

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ “ಇಂದಿರಾ ಕ್ಯಾಂಟೀನ್‌’ ಸೇವೆ ಇನ್ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲೂ ದೊರೆಯಲಿದೆ. ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ ವಿಸ್ತರಿಸಲು ಸರ್ಕಾರ ಉದ್ದೇಶಿಸಿದೆ. ಇದಕ್ಕೆ ಪೂರಕವಾಗಿ ಕ್ಯಾಂಟೀನ್‌ ನಿರ್ಮಾಣಕ್ಕೆ ಕೆಎಸ್‌ಆರ್‌ಟಿಸಿ ನಿಲ್ದಾಣಗಳ ಆವರಣಗಳಲ್ಲಿ ಅಗತ್ಯ ಜಾಗ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ  ಎಚ್‌.ಎಂ.ರೇವಣ್ಣ ತಿಳಿಸಿದರು. ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ
ಪಟ್ಟಣ, ತಾಲೂಕು, ನಗರ ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿ¨ªಾರೆ.

Advertisement

ಅದಕ್ಕೆ ಪೂರಕವಾಗಿ ಸಾರಿಗೆ ನಿಗಮಗಳ ಬಸ್‌ ನಿಲ್ದಾಣಗಳಲ್ಲಿ ಈಗಾಗಲೇ ಇರುವ ಕ್ಯಾಂಟೀನ್‌ಗಳಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ಬೇಡಿಕೆಗೆ ಅನುಗುಣವಾಗಿ ಇಂದಿರಾ ಕ್ಯಾಂಟೀನ್‌ಗೆ ಜಾಗ ನೀಡಲು ನಿರ್ಧರಿಸಲಾಗಿದೆ ಎಂದರು. ಪೀಣ್ಯಕ್ಕೆ μàಡರ್‌ ಸೇವೆ: ಸುಮಾರು 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪೀಣ್ಯ ಬಸವೇಶ್ವರ ಬಸ್‌ ಟರ್ಮಿನಲ… ಸ್ಥಗಿತಗೊಂಡಿದ್ದು, ಇದನ್ನು 2 ಹಂತಗಳಲ್ಲಿ ಸೇವೆ ಕಲ್ಪಿಸಲು ಉದ್ದೇಶಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ ಆರ್‌ಟಿಸಿ ಜತೆಗೆ ಬಿಎಂಟಿಸಿ ಸಂಪರ್ಕ ಸೇವೆಗಳನ್ನು ಆರಂಭಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next