Advertisement

ಇಂದಿರಾ ಕ್ಯಾಂಟೀನ್‌ ಟೆಂಡರ್‌ ರದ್ದು ಮಾಡುವ ಬಗ್ಗೆ ಪರಿಶೀಲನೆ?

09:49 AM Dec 24, 2019 | Hari Prasad |

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನ ನಿರ್ವಹಣೆ ಮತ್ತು ಆಹಾರ ಪೂರೈಕೆಗೆ ಸಂಬಂಧಿಸಿದ ಟೆಂಡರ್‌ ಪ್ರಕ್ರಿಯೆಯಲ್ಲಿ ಚೆಪ್ಟಾಕ್‌ ಮತ್ತು ರಿವಾರ್ಡ್‌ ಸಂಸ್ಥೆಗಳು ಭಾಗವಹಿಸಿವೆ ಎಂದು ಮೇಯರ್‌ ಎಂ. ಗೌತಮ್‌ ಕುಮಾರ್‌ ಹೇಳಿದ್ದಾರೆ.

Advertisement

ಸುದ್ದಿಗಾರ ಜತೆ ಸೋಮವಾರ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ ನಾಲ್ಕು ಪ್ಯಾಕೇಜ್‌ಗಳಂತೆ ಟೆಂಡರ್‌ ಕರೆಯಲಾಗಿದ್ದು, ಮೂರು ಪ್ಯಾಕೇಜ್‌ಗಳಲ್ಲಿ ಚೆಪ್ಟಾಕ್‌ ಮತ್ತು ರಿವಾರ್ಡ್‌ ಸಂಸ್ಥೆಗಳು ಭಾಗವಹಿಸಿವೆ. ಇವುಗಳ ತಾಂತ್ರಿಕ ಬಿಡ್‌ ಆಗಿದೆ ಎಂದು ತಿಳಿಸಿದರು.

ಪೂರ್ವ ವಲಯದಲ್ಲಿ ನಾಲ್ಕು ಏಜಿನ್ಸಿಗಳು ಭಾಗವಹಿಸಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಪೂರ್ವ ವಲಯದಲ್ಲಿ ಅಂತಿಮವಾಗಿಲ್ಲ. ಇಂದಿರಾ ಕ್ಯಾಂಟೀನ್‌ ಟೆಂಡರ್‌ಗೆ ಸಂಬಂಧಿಸಿದಂತೆ ಈ ಹಿಂದೆಯೇ ಡಿಪಿಆರ್‌ (ಸಮಗ್ರ ಯೋಜನಾ ವರದಿ) ರಚನೆ ಮಾಡಲಾಗಿತ್ತು. ಇಂದಿರಾ ಕ್ಯಾಂಟೀನ್‌ನ ಬಗ್ಗೆ ಎಸಿಬಿ ತನಿಖೆ ಮಾಡಿದೆ ಈ ವರದಿಯನ್ನು ಪರಿಶೀಲಿಸಲಾಗುವುದು, ಮೆನು ಬದಲಾವಣೆ ಬಗ್ಗೆಯೂ ಪರಿಶೀಲಿಸಿ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದರು.

ಚೆಪ್ಟಾಕ್‌ ಮತ್ತು ರಿವಾರ್ಡ್‌ ಸಂಸ್ಥೆಗಳು ಇಂದಿರಾ ಕ್ಯಾಂಟೀನ್‌ನ ನಿರ್ವಹಣೆ ಸರ್ಮಪಕವಾಗಿ ಮಾಡಿಲ್ಲ, ಗುಣಮಟ್ಟದ ಆಹಾರ ನೀಡುತ್ತಿಲ್ಲ ಹಾಗೂ ಹೆಚ್ಚು ಹಣ ಪಡೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಹೀಗಾಗಿ, ಈ ಬಾರಿ ಚೆಪ್ಟಾಕ್‌ ಮತ್ತು ರಿವಾರ್ಡ್‌ ಸಂಸ್ಥೆಗಳ ಟೆಂಡರ್‌ ರದ್ದುಪಡಿಸಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next