Advertisement
ಕಳೆದ 5 ವರ್ಷಗಳ ಹಿಂದೆ ಆರಂಭವಾದ ಇಂದಿರಾ ಕ್ಯಾಂಟೀನ್ ನಲ್ಲಿ ಆಪಾರ ಸಂಖ್ಯೆಯಲ್ಲಿ ಜನರು ಸದುಪಯೋಗ ಪಡೆಯುತ್ತಿದ್ದರು, ಗ್ರಾಮೀಣ ಪ್ರದೇಶದಿಂದ ಸರ್ಕಾರಿ ಇಲಾಖೆಗಳಲ್ಲಿ ತಮ್ಮ ಸಮಸ್ಯೆ ಬಗೆಹರಿಸಿಕೊಳ್ಳಲು ಬರುತ್ತಿದ್ದ ರೈತರು, ಶಾಲಾ ಮಕ್ಕಳು, ಆಟೋ ಚಾಲಕರ ಸಾವಿರಾರು ಮಂದಿ ಹಸಿವು ನೀಗಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ ಇಂದಿರಾ ಕ್ಯಾಂಟೀನ್ ಚಿತ್ರಣ ಬದಲಾಗಿದೆ.
Related Articles
Advertisement
ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾತನಾಡಿ, ವಿಷಯ ತಿಳಿದ ತಕ್ಷಣ ನಾನು ಖುದ್ದು ಭೇಟಿ ನೀಡಿ ಎಲ್ಲವನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಕಾಂಟ್ರಾಕ್ಟರ್ ನಿಖಿಲ್ ರವರಿಗೆ ದೂರವಾಣಿ ಮೂಲಕ ಕರೆ ಮಾಡಿ ಒಂದು ವಾರದೊಳಗೆ ವೇತನವನ್ನು ನೀಡಬೇಕೆಂದು ತಿಳಿಸಿರುತ್ತೇನೆ ಮತ್ತು ಇನ್ನು ಮುಂದೆ ಇಂದಿರಾ ಕ್ಯಾಂಟೀನ್ ಗೆ ಬರುವ ಪ್ರತಿಯೊಬ್ಬರಿಗೂ ಗುಣಮಟ್ಟದ ಆಹಾರವನ್ನು ನೀಡಬೇಕೆಂದು ತಿಳಿಸಿದ್ದೇನೆ ಮತ್ತು ಕಂಟ್ರಾಕ್ಟರ್ ನಿಖಿಲ್ ಗೆ ನೋಟಿಸ್ ನೀಡುವಂತೆ ಈಗಾಗಲೇ ಆದೇಶಿಸಿದ್ದೇನೆ ಎಂದರು.
ದಲಿತ ಮುಖಂಡ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ ತಾಲೂಕಿನ ಬಡ ಜನತೆಯ ಹಸಿವು ನೀಗಿಸುತ್ತಿದ್ದ ಇಂಧಿರಾ ಕ್ಯಾಂಟೀನ್‌ಗೆ ಗುತ್ತಿಗೆದಾರ ಸಮರ್ಪಕವಾಗಿ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡದೆ ಹಾಗೂ ಸಿಬ್ಬಂದಿಗೆ ವೇತನ ನೀಡದೆ ಪ.ಪಂ.ಯಿಂದ ಸಂಪೂರ್ಣ ಬಿಲ್ ಪಡೆದಿದ್ದು ಸಂಬಂದಿಸಿದ ಅಧಿಕಾರಿಗಳು ತಕ್ಷಣ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಂಡು ಸಿಬ್ಬಂದಿಗೆ ವೇತನ ಕೊಡಿಸುವಂತೆ ಹಾಗೂ ಕ್ಯಾಂಟೀನ್ ಪ್ರಾರಂಭಿಸುವಂತೆ ಆಗ್ರಹಿಸಿ ಅವರು ತಪ್ಪಿದರೆ ಸಿಬ್ಬಂದಿಯೊಂದಿಗೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ.ಪಂ.ಅಧ್ಯಕ್ಷೆ ಕಾವ್ಯರಮೇಶ್ ಸ್ಥಳಕ್ಕೆ ಬೇಟಿ ನೀಡಿ ಮಾತನಾಡಿ ಪಟ್ಟಣ ಪಂಚಾಯಿತಿ ವತಿಯಿಂದ ಗುತ್ತಿಗೆದಾರರಿಗೆ ಯಾವುದೇ ಬಿಲ್ ಬಾಕಿ ಇಲ್ಲ ಇಂದಿರಾ ಕ್ಯಾಂಟೀನ್ ನಿಂದ ಸಾರ್ವಜನಿಕರಿಗೆ ತೋಂದರೆಯಾಗಬಾರದು ಎಂಬ ದೃಷ್ಟಿಯಿಂದ ಕಾಲ ಕಾಲಕ್ಕೆ ಸರಿಯಾಗಿ ಬಿಲ್ ಪಾವತಿಸಲಾಗಿದೆ. ಸಿಬ್ಬಂದಿಗೆ ವೇತನ ನೀಡಿಲ್ಲ ಎಂಬ ವಿಷಯ ತಿಳಿದು ಗುತ್ತಿಗೆದಾರರಿಗೆ ದೂರವಾಣಿ ಮಾಡಿದರೆ ಗುತ್ತಿಗೆದಾರ ದೂರವಾಣಿ ಸ್ವೀಕರಿಸುತ್ತಿಲ್ಲ.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.