ಮಂಡ್ಯ : 2017 ರಲ್ಲಿ ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಮತ್ತು ಸಹೋದರಿ ಕವಿತಾ ಲಂಕೇಶ್ ಅವರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದರು.
ಬೆಳ್ಳೂರು ಕ್ರಾಸ್‌ನಲ್ಲಿ ನಡೆದ ಪಾಯಯಾತ್ರೆಯಲ್ಲಿ ಇಂದಿರಾ ಮತ್ತು ಕವಿತಾ ಅವರು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆಹಾಕಿ ಮಾತುಗಳನ್ನಾಡಿದರು.
ಇದನ್ನೂ ಓದಿ : ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್
”ಗೌರಿ ಸತ್ಯದ ಪರ ನಿಂತರು,ಗೌರಿ ಧೈರ್ಯವಾಗಿ ನಿಂತರು,ಗೌರಿ ಸ್ವಾತಂತ್ರ್ಯಕ್ಕಾಗಿ ನಿಂತರು. ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ.ಭಾರತ್ ಜೋಡೋ ಯಾತ್ರೆ ಅವರ ಧ್ವನಿ, ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ!” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.