Advertisement

ನಗರದಲ್ಲಿ ಇಂದಿರಾ ಸಾರಿಗೆ

11:01 AM Nov 04, 2017 | Team Udayavani |

ಬೆಂಗಳೂರು: ನಗರದಲ್ಲಿ ಈಗಾಗಲೇ ಜಾರಿಯಲ್ಲಿರುವ “ಅಟಲ್‌ ಸಾರಿಗೆ’ ಜತೆಗೆ “ಇಂದಿರಾ ಸಾರಿಗೆ’ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತಂತೆ ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಹೇಳಿದರು.

Advertisement

ಕೆಪಿಸಿಸಿ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ನಂತರ ಸುದ್ದಿಗಾರರ ಜತೆ ಮಾತನಾಡಿ, ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ರಿಯಾಯ್ತಿ ದರದಲ್ಲಿ ಆಯ್ದ ಪ್ರದೇಶಗಳಿಗೆ ಇಂದಿರಾ ಸಾರಿಗೆ ಬಸ್‌ಗಳನ್ನು ಓಡಿಸಲು ಯೋಜಿಸಲಾಗಿದ್ದು, ಈ ಯೋಜನೆಯ ಸಾಧಕ -ಬಾಧಕಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಎಷ್ಟು ಪ್ರಮಾಣದಲ್ಲಿ ರಿಯಾಯ್ತಿ ನೀಡಬೇಕು ಎನ್ನುವುದು ಇನ್ನೂ ತೀರ್ಮಾನವಾಗಿಲ್ಲ. ಶೀಘ್ರವೇ ಅಂತಿಮಗೊಳಿಸಿ ಇಂದಿರಾ ಸಾರಿಗೆ ಆರಂಭಿಸುತ್ತೇವೆ.

ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ನಗರ ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 9 ಲಕ್ಷ ಕಿ. ಮೀ ಸಂಚರಿಸಿರುವ ಬಸ್‌ಗಳನ್ನು ಬದಲಾವಣೆ ಮಾಡಲು ತೀರ್ಮಾನಿಸಲಾಗಿದ್ದು, ರಸ್ತೆ ಸಾರಿಗೆ ವ್ಯವಸ್ಥೆಯನ್ನು ಖಾಸಗಿಕರಣ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next