ಜಕಾರ್ತಾ/ಇಂಡೋನೇಷ್ಯಾ: ಇಂಡೋನೇಷ್ಯಾದ ಸುಲಾವೇಸಿ ದ್ವೀಪಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಆಸ್ಪತ್ರೆಯೊಂದು ಕುಸಿದು ಬಿದ್ದಿದ್ದು ಹಲವಾರು ಮಂದಿ ರೋಗಿಗಳು ಅವಶೇಷಗಳಡಿಯಲ್ಲಿ ಸಿಲುಕಿದ್ದು, ಮೂವರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಆಸ್ಪತ್ರೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಾಗಿ ಮಾಮುಜು ನಗರದ ರಕ್ಷಣಾ ಏಜೆನ್ಸಿ ಏರಿಯಾನಾಟೋ ತಿಳಿಸಿದೆ.
ಆಸ್ಪತ್ರೆಯ ಅವಶೇಷಗಳಡಿ ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.
ಇದನ್ನೂ ಓದಿ:ಸಂತೋಷ ಕೂಟಕ್ಕೆ ಹೊರಟವರು ಮಸಣ ಸೇರಿದರು!: ಭೀಕರ ಅಪಘಾತದಲ್ಲಿ 9 ಮಹಿಳೆಯರು ಸೇರಿ 11 ಸಾವು
ಆದರೆ ಘಟನೆಯಲ್ಲಿ ಎಷ್ಟು ಮಂದಿ ರೋಗಿಗಳು ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಬಗ್ಗೆ ಯಾವುದೇ ಅಧಿಕೃತ ಅಂಕಿ ಅಂಶ ನೀಡಿಲ್ಲ ಎಂದು ವರದಿ ತಿಳಿಸಿದೆ.