ಜಕಾರ್ತಾ : ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 162 ಕ್ಕೆ ಏರಿಕೆಯಾಗಿದ್ದು 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಕ್ಷಣಾ ತಂಡದಿಂದ ಭೂಕಂಪ ಪ್ರದೇಶದಲ್ಲಿ ಅವಶೇಷಗಳಡಿ ಸಿಲುಕಿರುವವರ ರಕ್ಷಣೆ ಕಾರ್ಯ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪವು ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜೂರ್ ಪ್ರದೇಶದಲ್ಲಿ 10 ಕಿಲೋಮೀಟರ್ (6.2 ಮೈಲಿ) ಆಳದಲ್ಲಿ ಕೇಂದ್ರೀಕೃತವಾಗಿತ್ತು. ಮನೆಗಳು ಸೇರಿದಂತೆ ಹತ್ತಾರು ಕಟ್ಟಡಗಳು ಹಾನಿಗೀಡಾಗಿವೆ ಎಂದು ಸಿಯಾಂಜೂರ್ ಜಿಲ್ಲೆಯ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಜಾವಾ ಗವರ್ನರ್ ರಿದ್ವಾನ್ ಕಾಮಿಲ್ ಇನ್ಸ್ಟಾಗ್ರಾಮ್ನಲ್ಲಿ 162 ಜನರು ಸಾವನ್ನಪ್ಪಿದ್ದಾರೆ ಮತ್ತು 326 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಸೋಮವಾರ ರಾತ್ರಿಯಿಂದಲೂ ರಕ್ಷಣಾ ತಂಡದಿಂದ ಬದುಕುಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.
ಇದನ್ನೂ ಓದಿ : ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಕಡಬದ ವ್ಯಕ್ತಿಯಿಂದ ಪಿಐಎಲ್