Advertisement

ಇಂದ್ರಧನುಷ್‌ ಲಸಿಕೆ ಅಭಿಯಾನ

04:07 PM Dec 04, 2019 | Suhan S |

ರಾಮನಗರ: ಇಂದ್ರಧನುಷ್‌ ಲಸಿಕ ಅಭಿಯಾನದಡಿ ರಾಜ್ಯದಲ್ಲಿ ಲಸಿಕೆ ಪಡೆಯದೇ ವಂಚಿತರಾಗಿರುವ 34,000 ಮಕ್ಕಳಿಗೆ ಹಾಗೂ 2,600 ಗರ್ಭೀಣಿ ಮಹಿಳೆಯರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಅರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಕ್ತರ್‌ ತಿಳಿಸಿದರು.

Advertisement

ತಾಲೂಕಿನ ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿ ಕೊಳ್ಳಲಾಗಿದ್ದ, ರಾಜ್ಯ ಮಟ್ಟದ ತೀವ್ರತರ ಇಂದ್ರಧನುಷ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 2017ನೇ ಸಾಲಿನಲ್ಲಿ ಪ್ರಥಮ ಇಂದ್ರ ಧನುಷ್‌ ಕಾರ್ಯಕ್ರಮವನ್ನು ನಡೆ ಸಲಾಗಿತ್ತು. ಇದು ಎರಡನೇಕಾರ್ಯ ಕ್ರಮವಾಗಿದೆ. ಈ ಬಾರಿ ಇಂದ್ರಧನುಷ್‌ ಕಾರ್ಯಕ್ರಮ 4 ಹಂತಗಳಲ್ಲಿ ನಡೆಯಲಿದೆ ಎಂದರು.

ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ರಾಯಚೂರು, ಬಳ್ಳಾರಿ ನಗರ ಪ್ರದೇಶ, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕ ಮಗಳೂರು, ಹಾಸನ, ಉತ್ತರ ಕನ್ನಡ, ಧಾರವಾಡ ಜಿಲ್ಲೆ ಸೇರಿದಂತೆ 20 ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಈಗಾಗಲೇ ಸಮೀಕ್ಷೆ ನಡೆಸಿ ಲಸಿಕೆ ನೀಡಬೇಕಿರುವ ಮಕ್ಕಳು ಹಾಗೂ ಮಹಿಳೆಯರನ್ನು ಗುರುತಿಸಿ ಗುರುತಿನ ಚೀಟಿ ನೀಡಲಾಗಿದೆ. ಅವರಿಗೆ ಲಸಿಕೆ ನೀಡಿ ಶೇ.100 ಸಾಧನೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ರಾಮನಗರ ಜಿಲ್ಲೆಯಲ್ಲಿ ಬಿಡದಿ ಮತ್ತು ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಗಳಲ್ಲಿ ಹಾಗೂ ವಲಸೆ ಹೋಗುವ ಸ್ಥಳಗಳಲ್ಲಿ ಲಸಿಕೆ ಪಡೆಯದೆ ಇರುವ ಮಕ್ಕಳು ಹೆಚ್ಚಾಗಿದ್ದಾರೆ. ಈ ಭಾಗಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಅವರು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

Advertisement

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಆಯುಕ್ತರಾದ ಪಂಕಜ್‌ ಕುಮಾರ್‌ ಪಾಂಡೆ, ಜಿಲ್ಲಾಧಿಕಾರಿ ಎಂ.ಎಸ್‌.ಅರ್ಚನಾ, ಜಿಲ್ಲಾಪಂಚಾಯತ್‌ ಸಿಇಒ ಇಕ್ರಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯನರಸಿಂಹ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next