Advertisement

8ರಿಂದ ಆರು ಜಿಲ್ಲೆಗಳಲ್ಲಿ ಇಂದ್ರಧನುಷ್‌ ಅಭಿಯಾನ

11:59 AM May 03, 2017 | Harsha Rao |

ಬೆಂಗಳೂರು: ಗರ್ಭಿಣಿಯರು ಹಾಗೂ ಮಕ್ಕಳಿಗೆ ಲಸಿಕೆ ಹಾಕುವ ನಾಲ್ಕನೇ ಹಂತದ ಇಂದ್ರಧನುಷ್‌ ಅಭಿಯಾನ
ಮೇ 8 ರಿಂದ ಆರು ಜಿಲ್ಲೆಗಳಲ್ಲಿ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ರಮೇಶ್‌ ಕುಮಾರ್‌ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗರ್ಭಿಣಿಯರು, 2 ವರ್ಷದೊಳಗಿನ ಹಾಗೂ 5 ರಿಂದ 6
ವರ್ಷದ ಅಪೂರ್ಣ ಲಸಿಕೆ ಪಡೆದಿರುವ ಮಕ್ಕಳಿಗೆ ಈ ಅಭಿಯಾನದಡಿ ಲಸಿಕೆ ಹಾಕಲಾಗುವುದು ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮಾತನಾಡಿ, ಮೇ
8ರಂದು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ, ಬೆಳಗಾವಿ, ಕಲಬುರಗಿ, ವಿಜಯಪುರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗರ್ಭಿಣಿಯರು ಹಾಗೂ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು.

Advertisement

ಇಲಾಖೆಯ ಆರೋಗ್ಯ ಕಾರ್ಯಕರ್ತರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಈ ಕುರಿತು ತರಬೇತಿ ನೀಡಲಾಗಿದೆ ಎಂದರು. ಮೇ, ಜೂನ್‌, ಜುಲೈ ಮತ್ತು ಆಗಸ್ಟ್‌ನಲ್ಲಿ ಇಂದ್ರಧನುಷ್‌ ಅಭಿಯಾನದಡಿ ಸಾರ್ವಜನಿಕ ರಜಾದಿನಗಳನ್ನು ಹೊರತುಪಡಿಸಿ ಲಸಿಕೆಗಳನ್ನು ಹಾಕಲು ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.

ಮೇನಲ್ಲಿ ಏಳು ದಿನಗಳ ಕಾಲ 8 ರಿಂದ 19ನೇ ತಾರೀಕಿನೊಳಗೆ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next