Advertisement
ಈ ರಸ್ತೆಯು ಬಹಳಷ್ಟು ಇಳಿಜಾರಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಿಲ್ಲ. ಇದರಿಂದಾಗಿ ಈ ಭಾಗದಲ್ಲಿ ತೆರಳುವ ಶಾಲಾ ವಾಹನ, ಆಟೋರಿಕ್ಷಾಗಳು, ದ್ವಿಚಕ್ರ ವಾಹನ, ಶಾಲಾ ಮಕ್ಕಳು, ವೃದ್ಧರ ಸಹಿತ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ. ಈ ಬಗ್ಗೆ ಈ ವರ್ಷಾರಂಭದಲ್ಲೇ ಜಿಲ್ಲಾಧಿಕಾರಿಗಳ ಸಹಿತ ನಗರಸಭೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಆದರೆ ಯಾವುದೇ ಕಾಮಗಾರಿ ನಡೆಸಿಲ್ಲ. ಈ ರಸ್ತೆಯಲ್ಲಿ ಈಗಾಗಲೇ ಹಲವು ಅವಘಡ ನಡೆದಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.
ಈ ರಸ್ತೆಯ ದುಸ್ಥಿತಿಯ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ ಅನಂತರ ಇತ್ತೀಚೆಗೆ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶೀಘ್ರದಲ್ಲೇ ಇದಕ್ಕೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ಕ್ರಮ ಅಗತ್ಯ
ಈಗಾಗಲೇ ಈ ರಸ್ತೆಯಲ್ಲಿ ಹಲವು ವಾಹನಗಳು ಅವಘಡಕ್ಕೀಡಾಗಿವೆ. ಈ ಬಗ್ಗೆ ಹಲವಾರು ಬಾರಿ ನಗರಸಭೆಗೆ ಮನವಿಯನ್ನೂ ಸಲ್ಲಿಸಲಾಗಿದೆ. ಆದರೆ ಕಾಮಗಾರಿ ಆರಂಭವಾಗಿಲ್ಲ. ವಾಹನ ಸವಾರರು, ಪಾದಚಾರಿಗಳು ಇದರಿಂದಾಗಿ ಹಲವಾರು ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಮಸ್ಯೆಗೆ ಮುಕ್ತಿ ನೀಡುವ ಕೆಲಸ ಆಗಬೇಕಿದೆ.
–ಯು.ದಿನೇಶ್ ಪೈ , ಸ್ಥಳೀಯರು