Advertisement
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉದ್ಯೋಗ ನೀತಿ ಪಾಲಿಸದ ಕೈಗಾರಿಕೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.
Related Articles
Advertisement
ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ನೀರನ್ನು ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದಿಂದ ಪಡೆಯಲಾಗುತ್ತದೆ. ಕೈಗಾರಿಕೆ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ ಆಗಲಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮಾರ್ಚ್ ಅಂತ್ಯದೊಳಗೆ ಲೋಕಾರ್ಪಣೆ ಖಚಿತ ಎಂದರು.
ವಿಜಯಪುರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನದ ಬಳಿಕ ಕುಡಿಯುವ ನೀರು, ತೋಟಗಾರಿಕೆ, ಕೃಷಿ ಅಭಿವೃದ್ಧಿ, ರೈತರ ಆರ್ಥಿಕ ಮಟ್ಟ ಬೆಳವಣಿಗೆ ಕುರಿತು ಅಧ್ಯಯನ ವರದಿ ಪಡೆಯುತ್ತೇನೆ ಎಂದರು.
ಅಭಿವೃದ್ಧಿಯಲ್ಲಿ ಹಿಂದುಳಿದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಸಂವಿಧಾನದ 371(ಜೆ) ಕಲಂ ಅನ್ವಯ ವಿಶೇಷ ಸ್ಥಾನಮಾನ ಅಸಾಧ್ಯ. ಆಗದ ಕೆಲಸದ ಬಗ್ಗೆ ಸುಳ್ಳು ಭರವಸೆ ಕೊಡಲ್ಲ. ಆದರೆ ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ವಿಜಯಪುರ ಜಿಲ್ಲೆಯನ್ನು 14,000 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಮಾಡುವುದು ನಮ್ಮ ಮುಂದಿರುವ ಆದ್ಯತೆ.-ಎಂ.ಬಿ.ಪಾಟೀಲ, ಸಚಿವರು