Advertisement

ವರ್ಷದಲ್ಲಿ ಏಕಸ್‌-ಯುಕ್ಲೆಸ್‌ ಕೈಗಾರಿಕೆ ಕಾರ್ಯಾರಂಭ: ಶೆಟ್ಟರ್

03:59 PM Jan 16, 2021 | Team Udayavani |

ಧಾರವಾಡ: ಜಿಲ್ಲೆಯನ್ನು ಕೈಗಾರಿಕೆ ದೃಷ್ಟಿಯಿಂದ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಏಕಸ್‌ ಮತ್ತು ಯುಕ್ಲೆಸ್‌ ಕೈಗಾರಿಕೆಗಳು ಇಟಗಟ್ಟಿ ಹಾಗೂ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

Advertisement

ಗರಗ ಗ್ರಾಮದಲ್ಲಿ ನೂತನ ಬಸ್‌ನಿಲ್ದಾಣ ಉದ್ಘಾಟನೆ ಹಾಗೂ ಗರಗ ಗ್ರಾಮದ ಪರಿಮಿತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ಸುಧಾರಣೆ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸುಮಾರು 5 ಸಾವಿರ ಕೋಟಿ ಬಂಡವಾಳವನ್ನು ಹೂಡಿ, ಒಂದು ವರ್ಷದಲ್ಲಿ ಕಾರ್ಯಾರಂಭ ಮಾಡಲಿವೆ. ಇದರಿಂದ ಸ್ಥಳೀಯವಾಗಿ ಸುಮಾರು 20 ಸಾವಿರ ಉದ್ಯೋಗ ಸೃಷ್ಟಿಯಾಗಲಿವೆ ಎಂದರು.

ಭಾರತ ಸರ್ಕಾರದ ಜಲಜೀವನ ಮಿಷನ್‌ ಯೋಜನೆಯ ಸಹಕಾರದಲ್ಲಿ ರಾಜ್ಯಸರ್ಕಾರವು ಜಲಧಾರೆ ಯೋಜನೆ ಮೂಲಕ ಜಿಲ್ಲೆಯ ಪ್ರತಿ ಗ್ರಾಮದ ಪ್ರತಿ ಮನೆಗೆ ಮಲಪ್ರಭಾ ನದಿಯ ಕುಡಿಯುವ ನೀರನ್ನು ಸರಬರಾಜು ಮಾಡಲು ಯೋಜನೆ ಸಿದ್ಧಗೊಳಿಸಿದ್ದು, ಅನುಷ್ಠಾನ ಹಂತದಲ್ಲಿದೆ. ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇದಲ್ಲದೇ ತುಪ್ಪರಿಹಳ್ಳ ಹಾಗೂ ಬೆಣ್ಣೆಹಳ್ಳದ ಸರ್ವೆà ಕಾರ್ಯ ಪೂರ್ಣಗೊಂಡಿದ್ದು, ಡಿಪಿಆರ್‌ ತಯಾರಾಗಿದೆ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾ ಜೋಶಿ ಮಾತನಾಡಿ, ಮುಂದಿನ ಮೂರು ವರ್ಷದಲ್ಲಿ ಭಾರತ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯಡಿ ಸುಮಾರು 14 ನೂರು ಕೋಟಿ ವೆಚ್ಚದಲ್ಲಿ ಮನೆಗಳಿಗೆ ನಳದ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಪ್ರಧಾನಮಂತ್ರಿ ಗ್ರಾಮಸಡಕ್‌ ಯೋಜನೆಯಡಿ 165 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲಾಗಿದೆ. 2022ರ ಹೊತ್ತಿಗೆ ರೈತರ ಆದಾಯ ದ್ವಿಗುಣಗೊಳಿಸುವ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು ಮತ್ತು ಹೊಸ ಕಾನೂನುಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಮೃತ ದೇಸಾಯಿ ಮಾತನಾಡಿ, ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದ್ದರೂ ಜಿಲ್ಲೆಯ ಕೇಂದ್ರ ಹಾಗೂ ರಾಜ್ಯ ನಾಯಕರ ಸಹಕಾರದಿಂದ ಪ್ರತಿ ಗ್ರಾಮದಲ್ಲಿ ರಸ್ತೆ, ಒಳಚರಂಡಿ, ವಸತಿ ಯೋಜನೆ ಮತ್ತು ಶಾಲೆಗಳ ಸುಧಾರಣೆಗೆ ಶ್ರಮಿಸಲಾಗಿದೆ. ಗರಗ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ನೂತನ ಬಸ್‌ನಿಲ್ದಾಣವನ್ನು ಸುಮಾರು 50ಲಕ್ಷ ವೆಚ್ಚದಲ್ಲಿ ಕಡಿಮೆ ಅವಧಿಯಲ್ಲಿ  ನಿರ್ಮಿಸಲಾಗಿದೆ. ಬಸ್‌ನಿಲ್ದಾಣದಲ್ಲಿ ಎರಡು ವಾಣಿಜ್ಯ ಮಳಿಗೆ, ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ

Advertisement

ಶೌಚಾಲಯ, ಮಹಿಳೆಯರಿಗೆ ವಿಶ್ರಾಂತಿ ಗƒಹ, ಸಂಚಾರಿ ನಿಯಂತ್ರಕರ ಕೊಠಡಿ ಮತ್ತು ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್‌ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಲೋಕೋಪ ಯೋಗಿ ಇಲಾಖೆಯಿಂದ ಧಾರವಾಡ ತಾಲೂಕಿನ ಮಂಗಸೂಳಿ-ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ-73 ರ ಗರಗ ಗ್ರಾಮ ಪರಿಮಿತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ಸುಧಾರಣೆ ಕಾಮಗಾರಿಯನ್ನು 330 ಲಕ್ಷಗಳಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಗ್ರಾಮೀಣ ವಿಭಾಗೀಯ ನಿಯಂತ್ರಣಾಧಿಕಾರಿ ಬಸಲಿಂಗಪ್ಪ ಬೀಡಿ ಪ್ರಾಸ್ತಾವಿಕ ಮಾತನಾಡಿದರು. ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀಪಾಟೀಲ, ಕರ್ನಾಟಕ ರಾಜ್ಯ ರೇಷ್ಮೆ ಮಂಡಳಿಯ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ತಾಪಂ ಅಧ್ಯಕ್ಷ ರವಿವರ್ಮಾ ಪಾಟೀಲ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ದೇಶಕರಾದ ಅಶೋಕ ಮಳಗಿ, ಸಂತೋಷಕುಮಾರ ಪಾಟೀಲ, ಪ್ರಕಾಶ ಗೋಡಬೋಲೆ, ಸಿದ್ಧಲಿಂಗೇಶ್ವರ ಮಠದ, ಶರಣ ಪಾಟೀಲ, ಸದಾಶಿವ ತೇಲಿ, ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಶಂಕರ ಮುಗದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ ಇನ್ನಿತರರಿದ್ದರು.

ಇದನ್ನೂ ಓದಿ:ಲಾಡವಂತಿ ಗ್ರಾಮದಲ್ಲಿ ಕಾಯಕೋತ್ಸವ ಚಾಲನೆ

ಜಿಲ್ಲೆಯಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಸುಮಾರು 15 ಕೋಟಿ ವೆಚ್ಚದಲ್ಲಿ 153 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ಸ್ವತ್ಛಭಾರತ ಯೋಜನೆಯಡಿ ಜಿಲ್ಲೆಯಲ್ಲಿ ಸುಮಾರು 24 ಸಾವಿರ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಉಜ್ವಲ ಯೋಜನೆಯಡಿ 6 ಸಾವಿರ ಕುಟುಂಬಗಳಿಗೆ ಉಚಿತವಾಗಿ ಗ್ಯಾಸ್‌ ವಿತರಿಸಲಾಗಿದೆ.
ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next