Advertisement

ಫೆಬ್ರವರಿಯಲ್ಲಿ ಕೈಗಾರಿಕೋದ್ಯಮಿಗಳ ಸಮಾವೇಶ: ಸಚಿವ ಎಂಟಿಬಿ ನಾಗರಾಜು

09:04 PM Jan 05, 2023 | Team Udayavani |

ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿರುವ ಬೃಹತ್‌ ಕೈಗಾರಿಕೆಗಳಿಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಗಾಗಿ ಬೃಹತ್‌ ಮತ್ತು ಸಣ್ಣ ಕೈಗಾರಿಕೋದ್ಯಮಿಗಳನ್ನು ಒಂದೆಡೆ ಸೇರಿಸಿ ಫೆಬ್ರವರಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದರು.

Advertisement

ಗುರುವಾರ ವಿಧಾನ ಸೌಧದಲ್ಲಿ ಕೈಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಮಾತನಾಡಿ, ನಗರದಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ 9.81ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆಯ ಒಪ್ಪಂದ ಮಾಡಿಕೊಂಡಿರುವ ಬೃಹತ್‌ ಉದ್ದಿಮೆಗಳಿಗೆ ಭಾರೀ ಪ್ರಮಾಣದಲ್ಲಿ ಬಿಡಿ ಭಾಗಗಳ ಅಗತ್ಯ ಬೀಳಲಿದೆ. ಆದ್ದರಿಂದ ಮತ್ತಷ್ಟು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸ್ಥಾಪನೆ ಆಗಬೇಕಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಫೆಬ್ರವರಿ ನಾಲ್ಕನೇ ವಾರದಲ್ಲಿ ಬೃಹತ್‌ ಮತ್ತು ಸಣ್ಣ ಉದ್ದಿಮೆದಾರರನ್ನು ಒಂದೆಡೆ ಸೇರಿಸಿ ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು. ತಾತ್ಕಾಲಿಕವಾಗಿ ಫೆ.22 ಮತ್ತು 23ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕ ಅಂತಿಮಗೊಳಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next