Advertisement
ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್. ನಿರಾಣಿ ನೇತೃತ್ವದಲ್ಲಿ ನಡೆದ 132ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಎಸ್‍ಡಬ್ಲ್ಯುಸಿಸಿ) ಸಭೆಯು ಈ ಯೋಜನೆಗಳಿಗೆ ಅನುಮೋದನೆ ನೀಡಿದೆ.
Related Articles
Advertisement
ಅನುಮೋದನೆ ನೀಡಿರುವ ಪ್ರಸ್ತಾವನೆಗಳು:
ಪರ್ಪಲ್‍ಸ್ಟಾರ್ ಹೈಜೀನ್ ಪ್ರೈವೇಟ್ ಲಿಮಿಟೆಡ್ – ಹೂಡಿಕೆ 270 ಕೋಟಿ ರೂ., ಉದ್ಯೋಗ – 400
ಬೆಳಗಾವಿ ಶುಗರ್ಸ್ ಪ್ರೈವೇಟ್ 240.84 ಕೋಟಿ ರೂ. ಹೂಡಿಕೆ, 170 ಉದ್ಯೋಗ
ಪರತ್ಪರ ಕಾಫಿ ಲಿಮಿಟೆಡ್ -236.8 ಕೋಟಿ ರೂ. ಹೂಡಿಕೆ, 200 ಉದ್ಯೋಗ
ಲಾಜಿಕಲಿ ಇನ್ಫೋಮೀಡಿಯಾ ಪ್ರೈವೇಟ್ ಲಿಮಿಟೆಡ್- 228.19 ಕೋಟಿ ರೂ. ಹೂಡಿಕೆ, 614 ಉದ್ಯೋಗ
ಎಎನ್‍ಎಸ್ ಪೇಪರ್ ಪ್ರೈವೇಟ್ ಲಿಮಿಟೆಡ್ -100 ಕೋಟಿ ರೂ. ಹೂಡಿಕೆ, 100 ಮಂದಿಗೆ ಉದ್ಯೋಗ
ಗೋದಾವತ್ ಪುಡ್ ಪ್ರೋ ಪ್ರೈವೇಟ್ ಲಿಮಿಟೆಡ್ -98.60 ಕೋಟಿ ರೂ. ಹೂಡಿಕೆ, ಉದ್ಯೋಗ – 30
ಜ್ಯೋತಿಸ್ನಾ ಲೈ-ಹೈಟೆಕ್ ಪ್ರೈವೇಟ್ ಲಿಮಿಟೆಡ್- 50 ಕೋಟಿ ರೂ. ಹೂಡಿಕೆ, ಜೊತೆಗೆ 220 ಉದ್ಯೋಗ
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇವಿ ರಮಣರೆಡ್ಡಿ, ಕೈಗಾರಿಕಾ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.