Advertisement
ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಜರೂರು, ರಾಜ್ಯದಲ್ಲಿರುವ ಬಿಎಚ್‌ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಚರ್ಚಿಸಿದರು.
Related Articles
Advertisement
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಬೇಗನೆ ಹಾಳಾಗುವ ಪದಾರ್ಥಗಳ ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್‌ಟಿ ತೆರಿಗೆ ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಈಗ ಇರುವ ಭಾರೀ ಆಮದು ತೆರಿಗೆ ಮತ್ತು ಸುಂಕ ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.