Advertisement

ಮನವಿ ಬಂದರೆ ಬೈಂದೂರಿನಲ್ಲಿ ಕೈಗಾರಿಕೆ ಸ್ಥಾಪನೆ : ಮಾಧುಸ್ವಾಮಿ

09:06 PM Feb 18, 2022 | Team Udayavani |

ವಿಧಾನಸಭೆ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕೆ ಸ್ಥಾಪನೆಗೆ ಬೇಡಿಕೆ ಬಂದರೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

Advertisement

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಕೈಗಾರಿಕೆಗಳು ಇಲ್ಲದಿರುವುದರಿಂದ ವಿದ್ಯಾವಂತ ಯುವಕರು ದೂರದ ಊರುಗಳಿಗೆ ಉದ್ಯೋಗಕ್ಕೆ ತೆರಳಬೇಕಾಗಿದೆ. ಸ್ಥಳೀಯವಾಗಿ ಕೈಗಾರಿಕೆ ಸ್ಥಾಪನೆ ಮಾಡಿದರೆ ಅನುಕೂಲವಾಗಲಿದೆ ಎಂದು ಹೇಳಿದರು. ಅದಕ್ಕೆ ಉತ್ತರಿಸಿದ ಸಚಿವರು, ಕೈಗಾರಿಕೆ ಸ್ಥಾಪನೆಗೆ ಬೇಡಿಕೆ ಇರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಜಮೀನು ಗುರುತಿಸುವ ಕೆಲಸ ಮಾಡಲಾಗುತ್ತಿದೆ.

ಬೈಂದೂರಿನಲ್ಲಿ ಕೈಗಾರಿಕೆ ಸ್ಥಾಪಿಸಲು ಯಾವುದೇ ಮನವಿ ಬಂದಿಲ್ಲ. ಶಾಸಕರು ಕೈಗಾರಿಕೆ ಸ್ಥಾಪನೆಗೆ ಮನವಿ ಸಲ್ಲಿಸಿದರೆ ಕೈಗಾರಿಕೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next