ಮುಂಬೈ: ಟೆಸ್ಟ್ ಸರಣಿ ಮುಗಿದ ಬಳಿಕ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿಗೆ ಸಜ್ಜಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ವಾಂಖೆಡೆ ಮೈದಾನದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿದೆ.
ಎರಡೂ ತಂಡಗಳ ನಾಯಕರು ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಅವರು ಸಂಪೂರ್ಣ ಸರಣಿಗೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತದ ನಾಯಕ ರೋಹಿತ್ ಶರ್ಮಾ ಅವರು ಕೌಟುಂಬಿಕ ಕಾರಣದಿಂದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದು, ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿದ್ದಾರೆ.
ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಆರಂಭಿಕರಾಗಿದ್ದಾರೆ. ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ. ಜಡೇಜಾ ಮತ್ತು ಕುಲದೀಪ್ ಸ್ಪಿನ್ನರ್ ಗಳಾಗಿದ್ದಾರೆ. ಆಸೀಸ್ ತಂಡದ ಡೇವಿಡ್ ವಾರ್ನರ್ ಗುಣಮುಖವಾಗದ ಕಾರಣ ಮಿಚೆಲ್ ಮಾರ್ಶ್ ಇನ್ನಿಂಗ್ ಆರಂಭಿಸಲಿದ್ದಾರೆ.
ತಂಡಗಳು
Related Articles
ಭಾರತ: ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿ.ಕೀ), ಹಾರ್ದಿಕ್ ಪಾಂಡ್ಯ (ನಾ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಶ್, ಸ್ಟೀವ್ ಸ್ಮಿತ್ (ನಾ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್ (ವಿ.ಕೀ), ಕ್ಯಾಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸವೆಲ್, ಮಾರ್ಕಸ್ ಸ್ಟೋಯಿನಸ್, ಸೀನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆಡ್ಯಂಡ ಜಂಪಾ.