Advertisement

ಇಂದಿನಿಂದ ಓವಲ್ ಕದನ: ಟಾಸ್ ಗೆದ್ದ ರೂಟ್; ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

03:07 PM Sep 02, 2021 | Team Udayavani |

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಇಂದಿನಿಂದ ಆರಂಭವಾಗಿದೆ. ಲಂಡನ್ ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಸರಣಿ ಮುನ್ನಡೆಗೆ ಉಭಯ ತಂಡಗಳು ಸೆಣಸಾಡುತ್ತಿದೆ.

Advertisement

ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಎರಡು ಬದಲಾವಣೆ ಮಾಡಿಕೊಂಡಿದೆ. ಜೋಸ್ ಬಟ್ಲರ್ ಬದಲಿಗೆ ಓಲಿ ಪೋಪ್ ಮತ್ತು ಸ್ಯಾಮ್ ಕರ್ರನ್ ಬದಲಿಗೆ ಕ್ರಿಸ್ ವೋಕ್ಸ್ ತಂಡಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ:ಅಂತಾರಾಷ್ಟ್ರೀಯ ಫುಟ್ ಬಾಲ್ ನಲ್ಲಿ ಅತೀ ಹೆಚ್ಚು ಗೋಲು ಬಾರಿಸಿದ ದಾಖಲೆ ಬರೆದ ರೊನಾಲ್ಡೊ

ಭಾರತ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ. ವೇಗಿಗಳಾದ ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿ ಬದಲಿಗೆ ಉಮೇಶ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಂಡಕ್ಕೆ ಎಂಟ್ರಿಯಾಗಿದ್ದಾರೆ. ನಿರೀಕ್ಷೆ ಮೂಡಿಸಿದ್ದ ಅಶ್ವಿನ್ ಗೆ ಈ ಪಂದ್ಯದಲ್ಲೂ ಜಾಗ ಸಿಗಲಿಲ್ಲ.

ತಂಡಗಳು:

Advertisement

ಭಾರತ: ಕೆ.ಎಲ್.ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿ.ಕೀ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ಇಂಗ್ಲೆಂಡ್: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾ), ಜಾನಿ ಬೈರ್‌ಸ್ಟೊ (ವಿ.ಕೀ), ಒಲ್ಲಿ ಪೋಪ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಒಲ್ಲಿ ರಾಬಿನ್ಸನ್, , ಜೇಮ್ಸ್ ಆಂಡರ್ಸನ್, ಕ್ರೆಗ್ ಓವರ್ಟನ್

Advertisement

Udayavani is now on Telegram. Click here to join our channel and stay updated with the latest news.

Next