Advertisement

INDvsENG; ಟೆಸ್ಟ್ ಕ್ರಿಕೆಟ್ ನಲ್ಲಿ 700 ವಿಕೆಟ್ ಕಿತ್ತ ಸಾಧನೆ ಮಾಡಿದ ಜೇಮ್ಸ್ ಆ್ಯಂಡರ್ಸನ್

12:30 PM Mar 09, 2024 | Team Udayavani |

ಧರ್ಮಶಾಲಾ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಐದನೇ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಹೊಸ ದಾಖಲೆ ಬರೆದಿದ್ದಾರೆ. ಮೂರನೇ ದಿನದಾಟದ ಆರಂಭದಲ್ಲಿ ವಿಕೆಟ್ ಕಬಳಿಸಿದ ಆ್ಯಂಡರ್ಸನ್ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ 700 ವಿಕೆಟ್ ಕಿತ್ತ ಸಾಧನೆ ಮಾಡಿದರು.

Advertisement

147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 700 ವಿಕೆಟ್ ಪಡೆದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

30 ರನ್ ಗಳಿಸಿದ್ದ ಕುಲದೀಪ್ ಯಾದವ್ ಅವರು ಆ್ಯಂಡರ್ಸನ್ ರ 700ನೇ ಬಲಿಯಾದರು. 41 ವರ್ಷದ ಜಿಮ್ಮಿ ಆ್ಯಂಡರ್ಸನ್, 187 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.

800 ವಿಕೆಟ್ ಪಡೆದಿರುವ ಮುತ್ತಯ್ಯ ಮುರಳೀಧರನ್ ಅವರು ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆಸೀಸ್ ದಿಗ್ಗಜ ಶೇನ್ ವಾರ್ನ್ ಅವರು ಎರಡನೇ ಸ್ಥಾನದಲ್ಲಿದ್ದು, 708 ವಿಕೆಟ್ ಕಬಳಿಸಿದ್ದಾರೆ. ಆ್ಯಂಡರ್ಸನ್ ಮೂರನೇ ಸ್ಥಾನದಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next