ಮುಂಬೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ನಾಲ್ಕನೇ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಂತಿಮ ಪಂದ್ಯಕ್ಕೆ ತಂಡಕ್ಕಾಗಮಿಸಿದ್ದಾರೆ.
ಇದೇ ವೇಳೆ ತಂಡದಲ್ಲಿದ್ದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಕೈಬಿಡಲಾಗಿದೆ. ಅವರು ಮಾರ್ಚ್ 2ರಿಂದ ಆರಂಭವಾಗಲಿರುವ ರಣಜಿ ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡು ಪರವಾಗಿ ಆಡಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಕೆಎಲ್ ರಾಹುಲ್ ಅವರು ಧರ್ಮಶಾಲಾದಲ್ಲಿ ನಡೆಯುವ ಅಂತಿಮ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಅವರನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಅವರ ಸಮಸ್ಯೆಯ ಹೆಚ್ಚಿನ ನಿರ್ವಹಣೆಗಾಗಿ ಲಂಡನ್ ನಲ್ಲಿರುವ ತಜ್ಞರೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ.
ಬಲ ಹಿಮ್ಮಡಿ ನೋವಿಗೆ ಒಳಗಾಗಿರುವ ಮೊಹಮ್ಮದ್ ಶಮಿ ಅವರು ಫೆಬ್ರವರಿ 26 ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಗೆ ತೆರಳಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
ಅಂತಿಮ ಪಂದ್ಯಕ್ಕೆ ತಂಡ: ರೋಹಿತ್ ಶರ್ಮಾ (ನಾ), ಜಸ್ಪ್ರೀತ್ ಬುಮ್ರಾ (ಉ.ನಾ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿ.ಕೀ), ಕೆಎಸ್ ಭರತ್ (ವಿ.ಕೀ), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.