ಧರ್ಮಶಾಲಾ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023ರಲ್ಲಿ ಇದುವರೆಗೂ ಅಜೇಯರಾಗಿ ಉಳಿದಿರುವ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಇಂದು ಮುಖಾಮುಖಿಯಾಗುತ್ತಿದೆ. ಧರ್ಮಶಾಲಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆದ್ದು ಕೂಟದಲ್ಲಿ ಅಜೇಯರಾಗಿ ಉಳಿಯಲು ಉಭಯ ತಂಡಗಳು ಸೆಣಸುತ್ತಿದೆ.
ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಗಾಯಗೊಂಡ ಕಾರಣ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಬದಲು ಸೂರ್ಯಕುಮಾರ್ ಯಾದವ್ ತಂಡಕ್ಕೆ ಎಂಟ್ರಿ ನೀಡಿದ್ದಾರೆ. ಅಲ್ಲದೆ ಶಾರ್ದೂಲ್ ಠಾಕೂರ್ ಬದಲು ಮೊಹಮ್ಮದ್ ಶಮಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಆಡಿದ ನಾಲ್ಕು ಪಂದ್ಯಗಳನ್ನೂ ಅಧಿಕಾರಯುತವಾಗಿ ಗೆದ್ದ ಭಾರತಕ್ಕೆ ನ್ಯೂಜಿಲ್ಯಾಂಡ್ ಸವಾಲು ಸುಲಭದ್ದಲ್ಲ. ಅದರಲ್ಲೂ ವಿಶ್ವಕಪ್‌ನಲ್ಲಿ ಈ ಬ್ಲ್ಯಾಕ್‌ಕ್ಯಾಪ್ಸ್ ಭಾರತಕ್ಕೆ ಆತಂಕ ಒಡ್ಡುತ್ತಲೇ ಬಂದಿದೆ. 9ರಲ್ಲಿ 5 ಪಂದ್ಯಗಳನ್ನು ನ್ಯೂಜಿಲ್ಯಾಂಡ್ ಜಯಿಸಿದೆ. ಭಾರತ ಗೆದ್ದದ್ದು ಮೂರರಲ್ಲಿ ಮಾತ್ರ. 2019ರ ಸೆಮಿಫೈನಲ್‌ನಲ್ಲಿ ಕೇನ್ ವಿಲಿಯಮ್ಸನ್ ಪಡೆ ಭಾರತವನ್ನು ಕೂಟದಿಂದಲೇ ಹೊರದಬ್ಬಿತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವುದು ಭಾರತದ ಮೊದಲ ಗುರಿ ಆಗಬೇಕು.
ತಂಡಗಳು
ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ನ್ಯೂಜಿಲ್ಯಾಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾ&ವಿ.ಕೀ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್