ವೆಲ್ಲಿಂಗ್ಟನ್: ಕೆಲವೇ ದಿನಗಳ ಹಿಂದಷ್ಟೇ ಟಿ20 ವಿಶ್ವಕಪ್ ಸೆಮಿ ಫೈನಲ್ ನಲ್ಲಿ ಸೋಲನುಭವಿಸಿದ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಇದೀಗ ದ್ವಿಪಕ್ಷೀಯ ಸರಣಿಗೆ ಸಜ್ಜಾಗಿದೆ. ಆದರೆ ವೆಲ್ಲಿಂಗ್ಟನ್ ನಲ್ಲಿ ಪಂದ್ಯಾರಂಭಕ್ಕೆ ಮಳೆ ಕಾಟ ಎದುರಾಗಿದೆ.
ಟಿ20 ಸರಣಿಯ ಮೊದಲ ಪಂದ್ಯ ವೆಲ್ಲಿಂಗ್ಟನ್ ನಲ್ಲಿ ಆಯೋಜನೆಯಾಗಿದೆ. ಆದರೆ ಮಳೆಯ ಕಾರಣದಿಂದ ಟಾಸ್ ಕೂಡಾ ವಿಳಂಬವಾಗಿದೆ.
ಎರಡು ವರ್ಷಗಳ ಬಳಿಕ ನಡೆಯುವ ಮಂದಿನ ಟಿ20 ಕೂಟವನ್ನು ಗಮನದಲ್ಲಿ ಇಟ್ಟುಕೊಂಡು ಉಭಯ ತಂಡಗಳು ಈ ಸರಣಿಯಲ್ಲಿ ಆಡಲು ಸಿದ್ಧತೆ ನಡೆಸಿದೆ. ಮುಂದಿನ ವಿಶ್ವಕಪ್ ನಲ್ಲಿ ತಂಡದ ನಾಯಕತ್ವ ವಹಿಸಲಿರುವ ಹಾರ್ದಿಕ್ ಪಾಂಡ್ಯ ಇದೀಗ ರೋಹಿತ್ ಶರ್ಮ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಇದೇ ವೇಳೆ ನ್ಯೂಜಿಲ್ಯಾಂಡ್ ತಂಡವು ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಪೂರ್ಣ ಪ್ರಮಾಣದ ತಂಡವನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ. ಟ್ರೆಂಟ್ ಬೌಲ್ಟ್ ಅನುಪಸ್ಥಿತಿಯಲ್ಲಿ ನ್ಯೂಜಿಲ್ಯಾಂಡ್ ತಂಡದ ವೇಗದ ಬೌಲರ್‌ಗಳನ್ನು ದಾಳಿಗೆ ಇಳಿಸಲು ಪ್ರಯತ್ನಿಸಲಿದೆ. ಓಪನರ್ ಮಾರ್ಟಿನ್ ಗಪ್ಟಿಲ್ ಆಡದ ಕಾರಣ ಫಿನ್ ಅಲೆನ್ ಅವರು ಅಗ್ರ ಕ್ರಮಾಂಕದಲ್ಲಿ ಡೆವೊನ್ ಕಾನ್ವೆ ಜತೆ ಆಡಲಿದ್ದಾರೆ.
ತಂಡಗಳು:
ಭಾರತ ತಂಡ: ಶುಭಮನ್ ಗಿಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾ), ರಿಷಭ್ ಪಂತ್ (ವಿ,ಕೀ), ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಶ್ರೇಯಸ್ ಐಯ್ , ಕುಲದೀಪ್ ಯಾದವ್, ಹರ್ಷಲ್ ಪಟೇಲ್.
ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿ.ಕೀ), ಕೇನ್ ವಿಲಿಯಮ್ಸನ್ (ನಾ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಮೈಕೆಲ್ ಬ್ರೇಸ್‌ವೆಲ್, ಇಶ್ ಸೋಧಿ