Advertisement

INDvsWI Test: ಟಾಸ್ ಗೆದ್ದ ವಿಂಡೀಸ್; ಟೆಸ್ಟ್ ಕ್ಯಾಪ್ ಪಡೆದ ಮುಖೇಶ್ ಕುಮಾರ್

07:24 PM Jul 20, 2023 | Team Udayavani |

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ತಂಡವು ಎರಡನೇ ಟೆಸ್ಟ್ ಪಂದ್ಯ ಆಡಲಿಳಿದಿದೆ. ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವಲ್ ನಲ್ಲಿ ನಡೆಯುತ್ತಿರುವ ದ್ವಿತೀಯ ಮತ್ತು ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿದೆ.

Advertisement

ಈ ಪಂದ್ಯದ ವಿಶೇಷವೆಂದರೆ ಅದು ವಿರಾಟ್ ಕೊಹ್ಲಿ ಅವರ 500ನೇ ಅಂತಾರಾಷ್ಟ್ರೀಯ ಪಂದ್ಯ. ಅಲ್ಲದೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನೂರನೇ ಟೆಸ್ಟ್ ಪಂದ್ಯವೂ ಹೌದು.

ಈ ಪಂದ್ಯಕ್ಕೆ ಭಾರತ ತನ್ನ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಗಾಯಗೊಂಡಿದ್ದು, ಅವರ ಬದಲಿಗೆ ಮುಕೇಶ್ ಕುಮಾರ್ ಸ್ಥಾನ ಪಡೆದಿದ್ದಾರೆ. ಇದು ಮುಖೇಶ್ ಕುಮಾರ್ ಅವರ ಮೊದಲ ಅಂತಾರಾಷ್ಟ್ರೀಯ ಪಂದ್ಯ.

ವೆಸ್ಟ್ ಇಂಡೀಸ್ ತಂಡದಲ್ಲಿ ಎರಡು ಬದಲಾವಣೆಯಾಗಿದೆ. ಮೆಕೆಂಜಿ ಪದಾರ್ಪಣೆ ಮಾಡುತ್ತಿದ್ದು, ಶೆನಾನ್ ಗೇಬ್ರಿಯಲ್ ತಂಡಕ್ಕೆ ವಾಪಾಸಾಗಿದ್ದಾರೆ.

ತಂಡಗಳು

Advertisement

ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ ವೈಟ್ (ನಾ), ಟಾಗೆನರೈನ್ ಚಂದ್ರಪಾಲ್, ಕಿರ್ಕ್ ಮೆಕೆಂಜಿ, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡ ಸಿಲ್ವಾ(ವಿ.ಕೀ), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕಾನ್, ಶಾನನ್ ಗೇಬ್ರಿಯಲ್

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿ.ಕೀ), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್

Advertisement

Udayavani is now on Telegram. Click here to join our channel and stay updated with the latest news.

Next