ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದೆ. ಟ್ರಿನಿಡಾಡ್ ನ ತರೌಬ್ ನ ಮೈದಾನದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಎರಡನೇ ಪಂದ್ಯದಂತೆ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೂರನೇ ಪಂದ್ಯದ ಭಾಗವಾಗಿಲ್ಲ. ಇಂದಿನ ಪಂದ್ಯಕ್ಕೂ ಹಾರ್ದಿಕ್ ಪಾಂಡ್ಯ ನಾಯಕತ್ವ ವಹಿಸಿದ್ದಾರೆ.
ಸರಣಿ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ರುತುರಾಜ್ ಗಾಯಕ್ವಾಡ್ ಮತ್ತು ಜಯದೇವ್ ಉನಾದ್ಕತ್ ಆಡುವ ಬಳಗದಲ್ಲಿ ಅವಕಾಶ ಪಡೆದಿದ್ದು, ಅವರಿಗಾಗಿ ಅಕ್ಷರ್ ಪಟೇಲ್ ಮತ್ತು ಉಮ್ರಾನ್ ಮಲಿಕ್ ಸ್ಥಾನ ತೆರವು ಮಾಡಿದ್ದಾರೆ.
ಎರಡನೇ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ವೆಸ್ಟ್ ಇಂಡೀಸ್ ಇಂದಿನ ಪಂದ್ಯದಲ್ಲೂ ಕಣಕ್ಕಿಳಿಸಿದೆ.
ವೆಸ್ಟ್ ಇಂಡೀಸ್: ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಜೆ, ಶಾಯ್ ಹೋಪ್(ನಾ/ವಿ.ಕೀ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಗುಡಕೇಶ್ ಮೋಟಿ, ಜೇಡನ್ ಸೀಲ್ಸ್
ಭಾರತ: ಇಶಾನ್ ಕಿಶನ್ (ವಿ.ಕೀ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಕುಲದೀಪ್ ಯಾದವ್, ಮುಖೇಶ್ ಕುಮಾರ್