Advertisement

ಶಿಶುಗಳ ಆರೋಗ್ಯ ಆದ್ಯತೆ ಅಗತ್ಯ

12:48 PM Oct 03, 2017 | |

ವಿಜಯಪುರ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗರ್ಭಿಣಿ ತಾಯಂದಿರು, ಬಾಣಂತಿಯರ ಮತ್ತು ಮಗುವಿನ ಆರೋಗ್ಯ ರಕ್ಷಣೆಗಾಗಿ ಮಾತೃಪೂರ್ಣ ಎಂಬ ಮಹತ್ವಾಕಾಂಕ್ಷೆ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದರು.

Advertisement

ಸೋಮವಾರ ತಿಕೋಟಾ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಪ್ರತಿ 1 ಲಕ್ಷ ಮಕ್ಕಳಲ್ಲಿ 133 ಮಕ್ಕಳು ಅಪೌಷ್ಟಿಕತೆಯಿಂದ ಮೃತಪಡುತ್ತಿವೆ. ಗರ್ಭಿಣಿಯರು ಹಾಗೂ ಬಾಣಂತಿ ತಾಯಿಯರ ಸಾವುಗಳ ಕೂಡ ಸಂಭವಿಸುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ
ಮಾತೃಪೂರ್ಣ ಎಂಬ ಮಹತ್ವಾಕಾಂಕ್ಷೆ ಯೋಜನೆ ಜಾರಿಗೊಳಿಸಿ ಗರ್ಭಿಣಿ, ತಾಯಂದಿರು, ಶಿಶುಗಳ ರಕ್ಷಣೆಗೆ ಮುಂದಾಗಿದೆ ಎಂದರು.

ಪ್ರತಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಿಂದ ಮಧ್ಯಾಹ್ನದ ಬಿಸಿಯೂಟ ಹಾಗೂ ಕಬ್ಬಿಣಾಂಶದ ಮಾತ್ರೆ ನೀಡುವ ವೈಶಿಷ್ಟ ಪೂರ್ಣ ಯೋಜನೆ ಇದಾಗಿದೆ. ಇದರ ನೈಜ ಅನುಷ್ಠಾನದಿಂದ ಪೂರ್ಣ ಪೌಷ್ಟಿಕಾಂಶವುಳ್ಳ ಮಧ್ಯಾಹ್ನದ ಬಿಸಿಯೂಟ ದೊರೆಯಲಿದೆ. ಜಿಲ್ಲೆಯ 26,797 ಗರ್ಭಿಣಿಯರು, 27,015 ಬಾಣಂತಿಯರು ಸೇರಿದಂತೆ 53,812 ಫಲಾನುಭವಿಗಳು ಸದುಪಯೋಗ ಪಡೆಯಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಅಲ್‌-ಅಮೀನ್‌ ಮೆಡಿಕಲ್‌ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಎಸ್‌.ಎಸ್‌. ಯರನಾಳ ಉಪನ್ಯಾಸ ನೀಡಿದರು. ಜಿಪಂ ಸದಸ್ಯೆ ಪ್ರತಿಭಾ ಪಾಟೀಲ, ಸುಮನ್‌ ಕೊಲ್ಹಾರ ಮಾತನಾಡಿದರು.

Advertisement

ಕೃಷ್ಣಾ ಕಾಡಾ ಅಧ್ಯಕ್ಷ ಜಕ್ಕಪ್ಪ ಎಡವೆ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಸಿಇಒ ಎಂ.ಸುಂದರೇಶಬಾಬು, ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟೆ, ಮಾಜಿ ಉಪಾಧ್ಯಕ್ಷ ತಮ್ಮಣ್ಣ ಹಂಗರಗಿ, ರವಿಗೌಡ ಪಾಟೀಲ ಇದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಶೋಕ ಕೆಲವಡೆ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಚಿವ ಎಂ.ಬಿ. ಪಾಟೀಲ ಸಹಾಯ ಧನದ ಚೆಕ್‌ ಹಾಗೂ ಭಾಗ್ಯಲಕ್ಷ್ಮೀ ಬಾಂಡ್‌ ವಿತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next