Advertisement

“ವಿಕ್ಟೋರಿಯಾ’ಸಿಬ್ಬಂದಿಗೆ ಮತ್ತೆ ಸೋಂಕು

05:35 AM Jun 18, 2020 | Lakshmi GovindaRaj |

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ 19 ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಮೂವರು ನರ್ಸ್‌ ಹಾಗೂ ಒಬ್ಬರು ಗ್ರೂಪ್‌ ಡಿ ಸಿಬ್ಬಂದಿಗೆ ಬುಧವಾರ ಸೋಂಕು ಇರುವುದು ದೃಢಪಟ್ಟಿದೆ. 32, 33 ವರ್ಷದ ಇಬ್ಬರು ಮಹಿಳಾ ಆರೋಗ್ಯ ಕಾರ್ಯಕರ್ತೆಯರು, 36 ವರ್ಷದ ಆರೋಗ್ಯ ಕಾರ್ಯಕರ್ತನಿಗೆ ಬುಧವಾರ ಸೋಂಕು ದೃಢಪಟ್ಟಿದೆ.

Advertisement

ಇನ್ನೊಬ್ಬರು ಗ್ರೂಪ್‌ ಡಿ ನೌಕರರಿಗೂ ಸೋಂಕು ದೃಢಪಟ್ಟಿದ್ದು, ಇವರ ವಿವರ ಆರೋಗ್ಯ ಇಲಾಖೆ ಬುಲೆಟಿನ್‌ನಲ್ಲಿ  ದಾಖಲಾಗಿಲ್ಲ. ಸೋಂಕು ದೃಢಪಟ್ಟ ಮೂವರು ನರ್ಸ್‌ಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು, ಗ್ರೂಪ್‌ ಡಿ ನೌಕರನ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಇವರು ಕೆಲಸ ಮುಗಿಸಿ ಮನೆಗೆ ತೆರಳುವಾಗ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋ ಧನಾ ಸಂಸ್ಥೆಯ ಡೀನ್‌ ಡಾ.ಜಯಂತಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ  ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗೆ ಸೋಂಕು ದೃಢಪಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next