Advertisement

ಸೋಂಕಿತರ ಪ್ರದೇಶ ಸಂಪೂರ್ಣ ಸೀಲ್‌ಡೌನ್‌: ಡಿಸಿ

01:46 PM Apr 16, 2020 | Suhan S |

ಬಾಗಲಕೋಟೆ: ಕೋವಿಡ್‌ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದ್ದು, ಸರಕಾರದ ನಿಯಮ ಕಟ್ಟುನಿಟ್ಟಾಗಿ ಜಿಲ್ಲೆಯ ಜನತೆ ಪಾಲಿಸಿದಾಗ ಮಾತ್ರ ಈ ರೋಗ ತಡೆಗಟ್ಟಲು ಸಾಧ್ಯವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ತಿಳಿಸಿದ್ದಾರೆ.

Advertisement

ಸೋಂಕಿತರ ಪ್ರಮಾಣ ಹೆಚ್ಚಾದಂತೆ ಜಿಲ್ಲೆಯಾದ್ಯಂತ 144 ಕಲಂ ಜಾರಿ ಮಾಡುವ ಮೂಲಕ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಲಾಯಿತು. ಜಿಲ್ಲೆಯಲ್ಲಿ ಜರಗುವ ಸಾರ್ವಜನಿಕ ಸಭೆ, ಸಮಾರಂಭ, ಜಾತ್ರೆ, ಸಂತೆಗಳನ್ನು ಬಂದ್‌ ಮಾಡಲಾಯಿತು. ಕೋವಿಡ್ 19 ಸಾಂಕ್ರಾಮಿಕ ರೋಗವಾಗಿದ್ದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ವಿವಿಧ ಜಾಗೃತಿ ಕಾರ್ಯಕ್ರಮ ಮಾಡಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಸದ್ಯ 14 ವ್ಯಕ್ತಿಗಳಲ್ಲಿ ಸೋಂಕು ತಗಲಿದ್ದು, ಅದರಲಿ ವೃದ್ದ ಮೃತಪಟ್ಟಿದ್ದು, ಆದರೂ ಸಹಿತ ಜಿಲ್ಲೆಯ ಜನತೆ ಮನೆಯಿಂದ ಹೊರಗೆ ಬರುತ್ತಿರುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದು ದುರದೃಷ್ಟಕರ ಸಂಗತಿ. ಈ ಹಿನ್ನೆಲೆಯಲ್ಲಿ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಕಳವಳ ಸಂಗತಿ. ಆದ್ದರಿಂದ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ.

ಮನೆಯಿಂದ ಹೊರಬರದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯವಿದೆ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಆರೋಗ್ಯ ಇಲಾಖೆ ಮಾಡುವ ಕಾರ್ಯಕ್ಕೆ ಸಹಕಾರ ಅಗತ್ಯವಾಗಿದೆ. ಕರ್ತವ್ಯ ನಿರತ ಪೊಲೀಸ್‌ ಸಿಬ್ಬಂದಿಗೆ ಕೋವಿಡ್ 19  ಸೋಂಕು ದೃಢಪಟ್ಟಿರುವುದು ದುಃಖದ ಸಂಗತಿ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಜನತೆಗೆ ಅಗತ್ಯ ಬೇಕಾಗುವ ವಸ್ತುಗಳನ್ನು ಪೂರೈಸಲು ನಾನಾ ವಿಧಾನ ಅನುಸರಿಸಲಾಗುತ್ತಿದೆ. ದಿನಸಿ ಮತ್ತು ತರಕಾರಿಗಳ ಕಿಟ್‌ಗಳನ್ನು ಮನೆಯ ಬಾಗಿಲಿಗೆ ಪೂರೈಸಲಾಗುತ್ತಿದೆ. ಬ್ಯಾಂಕ್‌ಗಳಿಗೆ ಹೋಗದೇ ಮನೆಯಲ್ಲಿಯೇ ಇದ್ದು ಅಂಚೆ ಇಲಾಖೆಯ ಮೂಲಕ 10 ಸಾವಿರ ರೂ. ಗಳವರೆಗೂ ಹಣ ತೆಗೆದುಕೊಳ್ಳಬಹುದಾಗಿದೆ. ಅಗತ್ಯ ವಸ್ತುಗಳ ಕೊರತೆಯಾಗದಂತೆ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಸರಕು ಸಾಗಾಣಿಕೆ ವಾಹನಗಳಿಗೆ ಲಾಕ್‌ಡೌನ್‌ದಿಂದ ಸರಕಾರ ವಿನಾಯಿತಿ ನೀಡಿದೆ ಎಂದು ತಿಳಿಸಿದರು.

Advertisement

ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿ ಸ್ವಚ್ಛತೆ ಕೈಗೊಳ್ಳಲಾಗುತ್ತಿದೆ. ನಿರ್ಬಧಿಂತ ಪ್ರದೇಶದಲ್ಲಿ ಮನೆಯಿಂದ ಹೊರಗೆ ಬಾರದಂತೆ ಸೀಲ್‌ಡೌನ್‌ ಮಾಡಲಾಗಿದೆ. ಇದರ ಉದ್ದೇಶ ಸೋಂಕಿತ ವ್ಯಕ್ತಿಯ ಪ್ರದೇಶದಲ್ಲಿನ  ಜನತೆ ಸಂಪರ್ಕಕ್ಕೆ ಬಂದಿರುವುದರಿಂದ ಅವರು ಹೊರಗಡೆ ಓಡಾಟ ನಡೆಸಿದರೆ ಸೋಂಕು ಬೇರೆಡೆ ಪ್ರದೇಶಕ್ಕೂ ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಸೀಲ್‌ ಡೌನ್‌ ಮಾಡಲಾಗಿದ್ದು, ಈ ಪ್ರದೇಶದ ಜನರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ವಿವಿಧ ವರ್ತಕರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next