ಚಿಕ್ಕಬಳ್ಳಾಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕೋವಿಡ್ ಸೋಂಕು ದಿನೇ ದಿನೆ ಹೆಚ್ಚಾಗುತ್ತಿರುವುದುಆತಂಕಕಾರಿ ಬೆಳವಣಿಗೆ. ಆದರೆ ಜಿಲ್ಲೆಯಲ್ಲಿ ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಸೋಂಕಿತರ ಸಂಖ್ಯೆ ಕಡಿಮೆ ಎಂದರೆ ತಪ್ಪಾಗಲಾರದು. ಸಿಲಿಕಾನ್ ಸಿಟಿ ಬೆಂಗಳೂರು ನಗರಕ್ಕೆ ಸಮೀಪವಿರುವ ಚಿಕ್ಕಬಳ್ಳಾಪುರ ಜಿಲ್ಲೆ ಬರಪೀಡಿತ ಜಿಲ್ಲೆಯೆಂದು ಅಪಖ್ಯಾತಿ ಹೊಂದಿದೆ. ಆದರೂ ಸಹ ಜಿಲ್ಲೆ ಅನೇಕ ಐತಿಹಾಸಿಕ ಮತ್ತು ಪ್ರವಾಸಿ ತಾಣಗಳ ಮೂಲಕ ವಿಶ್ವ ವಿಖ್ಯಾತಿಗೊಂಡಿದೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಧಿಕಾರಿ ಆರ್.ಲತಾ ನೇತೃತ್ವದಲ್ಲಿ ಆರೋಗ್ಯ, ಶಿಕ್ಷಣ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಅಧಿಕಾರಿಗಳನ್ನು ಒಳಗೊಂಡಂತೆ ತಂಡ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜನಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಶಿಕ್ಷಕರು ಒಬ್ಬರುಹಾಗೂ ಗ್ರಾಮ ಪಂಚಾಯತಿಯ ಕರ ವಸೂಲುಗಾರ ಮತ್ತು ಉಪನ್ಯಾಸಕರೊಬ್ಬರು ಕೋವಿಡ್ ಸೋಂಕಿಗೆ ಹುತಾತ್ಮರಾಗಿದ್ದಾರೆ. ಆದರೆ ಇವರಿಗೆ ಸರ್ಕಾರದಿಂದ ಯಾವುದೇ ರೀತಿಯ ವಿಶೇಷ ಪರಿಹಾರ ಲಭಿಸಿಲ್ಲ.
ಚೇತರಿಕೆ: ಜಿಲ್ಲೆಯಲ್ಲಿ ಸುಮಾರು 75 ಶಿಕ್ಷಕರು, 60 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕೋವಿಡ್ ಸೋಂಕು ತಗುಲಿಚೇತರಿಸಿ ಕೊಳ್ಳುತ್ತಿದ್ದಾರೆ.ಈಗಾಗಲೇಚಿಕಿತ್ಸೆಪಡೆದುಕೊಂಡಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಇತ್ತೀಚೆಗೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆಆದರೂಸಹಜಿಲ್ಲಾಡಳಿತ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳುತ್ತಿದೆ.
ದಂಡ ವಸೂಲಿ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಸಹ ಕೈಗೊಳ್ಳುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ನು (ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತ) ಕಡೆಗಣಿಸಿ ಸಂಚರಿಸುವ ನಾಗರಿಕರನ್ನು ಗುರುತಿಸಿ ದಂಡ ವಿಧಿಸುವ ಕಾರ್ಯವನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಡುತ್ತಿದ್ದಾರೆ. ಈಗಾಗಲೇ ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಕಳೆದ 4 ತಿಂಗಳ ಅವಧಿಯ್ಲಲಿ ಸುಮಾರು 1.75 ಲಕ್ಷ ದಂಡವನ್ನು ಪೌರಾಯುಕ್ತ ಡಿ.ಲೋಹಿತ್ ನೇತೃತ್ವದಲ್ಲಿ ವಸೂಲಿ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಬಿಗಿ ಕ್ರಮ ಕೈಗೊಳ್ಳಲಾಗಿದೆ.ಕೊರೊನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರು ಒಬ್ಬರು ಚಿಂತಾಮಣಿ ತಾಲೂಕಿನಲ್ಲಿ ಮೃತ ಪ್ರಕರಣ ಹೊರತುಪಡಿಸಿ ಬೇರೆ ಯಾರೂ ಸಹ ಕೋವಿಡ್ ಸೋಂಕಿನಿಂದ ಮೃತಪಟ್ಟಿಲ್ಲ.
– ಆರ್.ಲತಾ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
ಜಿಲ್ಲೆಯಲ್ಲಿ ಸುಮಾರು 60 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.ಯಾವುದೇ ರೀತಿಯ ತೊಂದರೆಗಳು ಆಗಿಲ್ಲ.
– ಮಿಥುನ್‌ಕುಮಾರ್, ಜಿಲ್ಲಾ ಎಸ್‌ಪಿ
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಶಿಕ್ಷಕರು ಸಹ ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 75 ಶಿಕ್ಷಕರಿಗೆ ಸೋಂಕು ತಗುಲಿ 61 ಶಿಕ್ಷಕರು ಚೇತರಿಸಿಕೊಂಡಿದ್ದಾರೆ ಇನ್ನೂ 13 ಶಿಕ್ಷಕರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಚಿಂತಾಮಣಿ ತಾಲೂಕಿನಲ್ಲಿ ಮಾತ್ರ ಒಬ್ಬ ಶಿಕ್ಷಕರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
–ನಾಗೇಶ್, ಡಿಡಿಪಿಐ, ಚಿಕ್ಕಬಳ್ಳಾಪುರ
–ಎಂ.ಎ.ತಮೀಮ್ ಪಾಷ