ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಾದರಿಗಳ ಪರೀಕ್ಷೆಯನ್ನು ಹೆಚ್ಚಿಸಿರುವುದರಿಂದ ಕೋವಿಡ್ ನಿಯಂತ್ರಣಕ್ಕೆ ಸಹಕಾರಿಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ರವಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ಶೇ.100 ಗುರಿ ಸಾಧಿಸಲಾಗಿದೆ. ಎರಡನೇ ಡೋಸ್ ವಿತರಣೆಯಲ್ಲಿ ಶೇ.85ರಷ್ಟು ಪೂರ್ಣಗೊಂಡಿದೆ. ಇದಕ್ಕಾಗಿ ಆರೋಗ್ಯ ಕಾರ್ಯಕರ್ತರ ಶ್ರಮ ಶ್ಲಾಘನೀಯ.
ಬೆಂಗಳೂರಿನಲ್ಲಿ ಮೂರು ದಿನಗಳಿಂದ ಪಾಸಿಟಿವ್ ಪ್ರಕರಣ ಕಡಿಮೆಯಾಗುತ್ತಿದೆ. ಮುಂದಿನ ಮೂರು ದಿನದಲ್ಲಿ ಸೋಂಕು ಇಳಿಕೆಯಾಗುವ ಬಗ್ಗೆ ಖಚಿತ ಮಾಹಿತಿ ಸಿಗಲಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಇಂದು 50 ಸಾವಿರ ಕೋವಿಡ್ ಕೇಸ್ : 165 ಹೊಸ ಒಮಿಕ್ರಾನ್; 19 ಸಾವು
ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಇತರೆ ಕರ್ನಾಟಕದಲ್ಲಿ ಸೋಂಕು ಹರಡಲು ಸುಮಾರು ಒಂದುವೆರೆ ತಿಂಗಳ ಅವಧಿ ಹಿಡಿಯಲಿದೆ. ಎರಡರಿಂದ ಮೂರು ವಾರದಲ್ಲಿ ಸೋಂಕು ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ ಎಂದರು.