Advertisement
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಸರಕಾರವು ಕೋವಿಡ್ 19 ಸೋಂಕು ವ್ಯಾಪಿಸುತ್ತಿರುವ ಕುರಿತು ಕಳೆದ ಐದು ದಿನಗಳ ಸಿಜಿಆರ್ (ಕಾಂಪೌಡೆಂಡ್ ಗ್ರೋಥ್ ರೇಟ್) ಬಿಡುಗಡೆ ಮಾಡಿದ್ದು, ದೇಶದಲ್ಲಿ ಕೋವಿಡ್ 19 ಸಿಜೆಆರ್ ಶೇ. 12.90 ಇದೆ. ರಾಜ್ಯವಾರು ಸಿಜೆಆರ್‌ನಲ್ಲಿ ಕರ್ನಾಟಕದಲ್ಲಿ ಶೇ. 6.05ರಷ್ಟಿದ್ದು, ಆ ಪ್ರಮಾಣದಲ್ಲಿ 19ನೇ ಸ್ಥಾನದಲ್ಲಿದೆ. ಸೋಂಕಿತರ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದೆ ಎಂದರು.
ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮಾತನಾಡಿ, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕೋವಿಡ್ 19 ಸೋಂಕು ಚಿಕಿತ್ಸಾ ಆಸ್ಪತ್ರೆ ಹಾಗೂ ಇತರ ಚಿಕಿತ್ಸಾ ಆಸ್ಪತ್ರೆ ಎಂದು ವಿಂಗಡಣೆ ಮಾಡಲಾಗುತ್ತಿದೆ. ಈಗಾಗಲೇ 31 ಆಸ್ಪತ್ರೆಗಳನ್ನು ಕೋವಿಡ್ 19 ಚಿಕಿತ್ಸಾ ಆಸ್ಪತ್ರೆ ಎಂದು ಗುರುತಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಹೆಚ್ಚಿಸಲಾಗುತ್ತದೆ. ಸದ್ಯದ ಮಟ್ಟಿಗೆ ಕೋವಿಡ್ 19 ಚಿಕಿತ್ಸೆಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 11,036 ಹಾಸಿಗೆ, 1,685 ತುರ್ತುನಿಗಾ ಘಟಕ, 784 ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.