Advertisement
ಅರಿವು ಮೂಡಿಸಿ: ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಅಂತರ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಡೆಂಘೀ ನಿಯಂತ್ರಣ ಕುರಿತಂತೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಅರಿವು ಮೂಡಿ ಸಬೇಕು. ವೈಯಕ್ತಿಕ ಗೃಹ ಹಾಗೂ ಸಮುದಾಯ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಯಬೇಕು ಎಂದರು.
Related Articles
Advertisement
•ಆಸ್ಪತ್ರೆಗಳಲ್ಲಿ ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ಮುಂಜಾಗ್ರತಾ ಕ್ರಮ ಅಗತ್ಯ: ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಕಡಿಮೆಯಾಗುತ್ತಿದ್ದು ಇನ್ನಷ್ಟು ಮುಂಜಾ ಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಇಲಾಖೆಯ ಅಧಿಕಾರಿ ಹಾಗೂ ಪ್ರತಿನಿಧಿಗಳು ಆರೋಗ್ಯ ಇಲಾಖೆ ಯಿಂದ ನಡೆಯುವ ಪ್ರತಿ ಕಾರ್ಯಕ್ರಮಗಳ ಬಗ್ಗೆ ನಿಗಾ ವಹಿಸಬೇಕು. ಯಾವೆಲ್ಲಾ ಕಾರ್ಯಕ್ರಮಗಳನ್ನು ಅನು ಷ್ಠಾನಗೊಳಿಸಲಾಗಿದೆ ಯಾವ ರೀತಿ ಕ್ರಮ ಕೈಗೊಳ್ಳ ಲಾಗಿದೆ. ಆ ಕಾರ್ಯಕ್ರಮ ಎಷ್ಟರ ಮಟ್ಟಿಗೆ ಪರಿಣಾಮಕಾರಿ ಯಾಗುತ್ತಿದೆ ಎಂಬುದರ ಮಾಹಿತಿ ಪಡೆಯಿರಿ ಎಂದು ಹೇಳಿದರು.
ಸೊಳ್ಳೆ ಪರದೆ ನೀಡಿ: ಆಸ್ಪತ್ರೆಗಳಲ್ಲಿ ರೋಗಿಗಳ ಆರೋಗ್ಯದ ಬಗ್ಗೆ ಹಾಗೂ ಆಸ್ಪತ್ರೆಯ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಸೊಳ್ಳೆಪರೆದೆಗಳನ್ನು ರೋಗಿಗಳಿಗೆ ನೀಡಬೇಕು. ಈ ರೀತಿಯ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬೇಕೆಂದು ಅಧಿಕಾರಿಗಳಿಗೆ ಕೆ.ಎನ್. ವಿಜಯ್ ಪ್ರಕಾಶ್ ನಿರ್ದೇಶನ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜನಾರ್ದನ್ ಮತ್ತಿತರರು ಹಾಜರಿದ್ದರು.