Advertisement

Moodbidri ಯುವತಿ ಮೈ ಮೇಲೆ ಕೈಹಾಕಿದ ಅನ್ಯಮತೀಯ: ಬಂಧನ

11:20 PM Aug 30, 2024 | Team Udayavani |

ಮೂಡುಬಿದಿರೆ: ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಪ್ರಾಂತ್ಯ ಗ್ರಾಮದ ಟೈಲರ್‌ ಅಂಗಡಿಯೊಂದಕ್ಕೆ ಹೋಗುತ್ತಿರುವಾಗ ತನ್ನ ಕ್ಲಾಸ್‌ಮೇಟ್‌ ಆಗಿದ್ದ ಅರ್ಷದ್‌ (21) ತನ್ನನ್ನು ಅಡ್ಡಗಟ್ಟಿ “ನೀನು ನನ್ನನ್ನು ಯಾಕೆ ಪ್ರೀತಿಸುತ್ತಿಲ್ಲ’ ಎಂದನಲ್ಲದೆ ತನ್ನ ಮೈ ಮೇಲೆ ಕೈ ಹಾಕಲು ಬಂದ ಎಂದು ಕೋಟೆಬಾಗಿಲಿನ ಯುವತಿ (19) ಆಪಾದಿಸಿ ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದಾರೆ.

Advertisement

ಘಟನೆ ನಡೆದಾಗ ತಾನು ಬೊಬ್ಬೆಹೊಡೆದ ಕೂಡಲೇ ಟೈಲರ್‌ ಹೊರಬಂದಾಗ ಆರೋಪಿ ಸ್ಥಳದಿಂದ ಓಡಿಹೋದ ನೆಂದೂ ದೂರಿನಲ್ಲಿ ತಿಳಿಸಲಾಗಿದೆ.

ಮಹಿಳೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಪ್ರಕರಣದನ್ವಯ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ.

ಮೂಲತಃ ಇರುವೈಲಿನವನಾದಅರ್ಷದ್‌ ಮೂಡುಬಿದಿರೆ ಕೊಡಂಗಲ್ಲು ಪಿಲಿಪಂಜರ ಎಂಬಲ್ಲಿದ್ದು, ಬಳಿಕ ಕೋಟೆಬಾಗಿಲಿನಲ್ಲಿ ಬಾಡಿಗೆ ಮನೆಯಲ್ಲಿ ರುವುದಾಗಿ ತಿಳಿದುಬಂದಿದೆ. ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆಲವು ಸಮಯದ ಹಿಂದೆ ಕೆಲಸ ಬಿಟ್ಟು ಮನೆಯಲ್ಲೇ ಇದ್ದು, ಗುರುವಾರ ಬಟ್ಟೆ ಹೊಲಿಸಲೆಂದು ಟೈಲರ್‌ ಅಂಗಡಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಲವ್‌ ಜೆಹಾದ್‌: ವಿಹಿಂಪ
ಹಿಂದೂ ಯುವತಿಯರನ್ನು ಗುರಿಯಾಗಿಸಿ ಪ್ರೀತಿ ಪ್ರೇಮ ಎಂಬ ನಾಟಕವಾಡಿ ಮೋಸಮಾಡಿ ಅವರನ್ನು ಮತಾಂತರ ಮಾಡುವ ಒಂದು ವ್ಯವಸ್ಥಿತ ಗುಂಪು ಇದೆ ಇದರ ಬಗ್ಗೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ವಿಶ್ವಹಿಂದೂಪರಿಷತ್‌ಪ್ರಮುಖ ಶರಣ್‌ ಕುಮಾರ್‌ ಪಂಪ್‌ವೆಲ್‌ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.