Advertisement

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತರೆ ಹಣದುಬ್ಬರ ನಿಯಂತ್ರಣಕ್ಕೆ ಬರಲಿದೆ

07:33 PM Mar 09, 2022 | Team Udayavani |

ರಾಜಸ್ಥಾನ : ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತರೆ ದೇಶದಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬರಲಿದೆ ಎಂದು ರಾಜಸ್ಥಾನದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರತಾಪ್‌ ಸಿಂಗ್‌ ಖಚರಿಯಾವಾಸ್‌ ಬುಧವಾರ ಹೇಳಿದ್ದಾರೆ.

Advertisement

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯು ಜನರಿಗೆ ದ್ರೋಹ ಮಾಡಿರುವುದರಿಂದ ನಾಳೆ ನಡೆಯುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫ‌ಲಿತಾಂಶದಿಂದ ದೇಶದ ಜನರು ಭರವಸೆ ಇಟ್ಟಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಬಿಜೆಪಿ ಸೋತರೆ ದೇಶವು ಹಣದುಬ್ಬರವನ್ನು ತೊಡೆದುಹಾಕುತ್ತದೆ ಜೊತೆಗೆ ಇದು ಬಿಜೆಪಿಗೆ ಪಾಠವನ್ನು ನೀಡುತ್ತದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ ಸರಕಾರವಾಗಿರಲಿ ಅಥವಾ ಬಿಜೆಪಿ ಸರಕಾರದ್ದಾಗಿರಲಿ ಅದರ ತಪ್ಪುಗಳನ್ನು ವಿರೋಧಿಸುವ ಜವಾಬ್ದಾರಿ ಜನರ ಮೇಲಿದೆ ಎಂದು ಸಚಿವರು ಹೇಳಿದರು.

ಪಂಜಾಬ್‌,ಉತ್ತರಪ್ರದೇಶ,ಉತ್ತರಾಖಂಡ, ಗೋವಾ ಮತ್ತು ಮಣಿಪುರ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಏಣಿಕೆ ನಾಳೆ(ಗುರುವಾರ) ನಡೆಯಲಿದೆ.

ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ: ಅರುಣ್‌ ಸಿಂಗ್‌
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕರಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದ್ದಾರೆ.

Advertisement

ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲ್ಲಲಿದೆ ಮತ್ತು ಉತ್ತರ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಅಲ್ಲದೆ ಪಂಜಾಬ್‌ನಲ್ಲಿಯೂ ಬಿಜೆಪಿ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಎಂದು ಅರುಣ್‌ ಸಿಂಗ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next