Advertisement

ಆಶಾ ಕಾರ್ಯಕರ್ತರಿಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ

09:13 AM Apr 17, 2020 | mahesh |

ಮಂಗಳೂರು: ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಸರ್ವೆ ನಡೆಸಲಿದ್ದು, ಜನರು ಮಾಹಿತಿ ನೀಡಿ ಸಹಕರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

Advertisement

ಯಾರೂ ಮನೆಯಿದ ಹೊರಬರಬೇಡಿ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜಿಲ್ಲೆಯಲ್ಲಿ 12 ಕೋವಿಡ್-19 ಪಾಸಿಟಿವ್‌ ಪ್ರಕರಣಗಳಲ್ಲಿ 9 ಮಂದಿ ಗುಣಮುಖರಾಗಿದ್ದಾರೆ. ಅವರಿಗೆಲ್ಲ ಮತ್ತೆ 14 ದಿನ ಹೋಂ ಕಾರಂಟೈನ್‌ಗೆ ವೈದ್ಯರು ಸೂಚಿಸಿದ್ದಾರೆ. ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಗುರುತಿಸಿ, ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

ಕೋವಿಡ್‌-19 ಸರ್ವೆ ಕಾರ್ಯದ ಮುಂದಿನ ಭಾಗವಾಗಿ ಇಡೀ ಜಿಲ್ಲೆಯಲ್ಲಿ influenza-like illness (ILI) ಅಥವಾ severe acute respiratory infection (SARI) ಸೋಂಕುಗಳಿಂದ ಬಳಲುತ್ತಿರುವವರ ಮಾಹಿತಿ ಕಲೆ ಹಾಕಬೇಕಾಗಿದೆ. ಇದಕ್ಕಾಗಿ ಆಶಾ ಕಾರ್ಯಕರ್ತೆಯರು ಹಾಗೂ ಮ.ನ.ಪಾ. ವ್ಯಾಪ್ತಿಯಲ್ಲಿ ಎಂಪಿಡಬ್ಲ್ಯುಗಳು ಆಗಮಿಸುತ್ತಾರೆ. ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕೋವಿಡ್‌-19 ಲಕ್ಷಣಗಳಾದ ಜ್ವರ, ಕೆಮ್ಮು, ಗಂಟಲುನೋವು ಉಸಿರಾಟದ ಸಮಸ್ಯೆಯ ಬಗ್ಗೆ ಕೆಲವು ಸರಳ ಪ್ರಶ್ನೆಗಳನ್ನು ಕೇಳುವರು. ಹೃದ್ರೋಗ ಸಮಸ್ಯೆ, ಮಧುಮೇಹ, ಬಿ.ಪಿ., ಕಿಡ್ನಿ ಸಮಸ್ಯೆ, ಕ್ಯಾನ್ಸರ್‌, 60 ವರ್ಷ ಮೇಲ್ಪಟ್ಟವರೇ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಲೇರಿಯಾ, ಡೆಂಗ್ಯೂ ಎಚ್ಚರಿಕೆ ಅಗತ್ಯ
ಮಳೆಗಾಲದ ಸಂದರ್ಭ ಸಾಧಾರಣವಾಗಿ ಕಾಣಿಸಿಕೊಳ್ಳುವ ಮಲೇರಿಯಾ ಮತ್ತು ಡೆಂಗ್ಯೂ ಬಗ್ಗೆಯೂ ಎಚ್ಚೆತ್ತುಕೊಳ್ಳಬೇಕಿದೆ. ಆಶಾ ಕಾರ್ಯಕರ್ತರು ಸರ್ವೆ ಸಂದರ್ಭ ಮನೆ ಪರಿಸರದಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ತಾಣಗಳ ಬಗ್ಗೆಯೂ ಗಮನ ಹರಿಸಲಿದ್ದಾರೆ. ಆಶಾ ಕಾರ್ಯಕರ್ತರಿಗೆ ಅಥವಾ ಎಂಪಿಡಬ್ಲ್ಯು ಅವರಿಗೆ ಜನರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೀಡಿಯೊ ಸಂದೇಶದಲ್ಲಿ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next