Advertisement

ಮನೆ ಮನೆಗೆ ಕಾಮಗಾರಿ ಮಾಹಿತಿ: ಸಚಿವ ಪ್ರಮೋದ್‌

03:35 PM May 20, 2017 | Team Udayavani |

ಬ್ರಹ್ಮಾವರ: ಜನರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲೇ ವಿನೂತನವಾದ ಗ್ರಾಮ ಮಟ್ಟದ ಜನಸಂಪರ್ಕ ಸಭೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜರಗುತ್ತಿದೆ. ಇದಕ್ಕೂ ಮೊದಲು ಗ್ರಾಮದ ಪ್ರತಿ ಮನೆಗೂ ಆಯಾ ಗ್ರಾಮ ವ್ಯಾಪ್ತಿಯಲ್ಲಿ ಕಳೆದ 4 ವರ್ಷಗಳಲ್ಲಿ ನಡೆದ ಅಭಿವೃದ್ದಿ ಕಾಮಗಾರಿಗಳ ಪಟ್ಟಿಯನ್ನು ನೀಡಲಾಗುತ್ತದೆ. ಇದರಿಂದ ಅವ್ಯವಹಾರಕ್ಕೆ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಅವರು ಶುಕ್ರವಾರ ಬ್ರಹ್ಮಾವರ ಮದರ್‌ ಪ್ಯಾಲೇಸ್‌ ಸಭಾಂಗಣದಲ್ಲಿ ವಾರಂಬಳ್ಳಿ ಗ್ರಾಮ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ನಗರ ಸಭೆಯ 35 ವಾರ್ಡ್‌ ಹಾಗೂ ಗ್ರಾಮಾಂತರದ 30 ಗ್ರಾಮಗಳಲ್ಲಿ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಈಗಾಗಲೇ 30 ಕಡೆಗಳಲ್ಲಿ ಸಭೆ ಪೂರ್ಣಗೊಂಡಿದೆ ಎಂದರು.

ರಾಜ್ಯಸರಕಾರದ ಸಾಧನೆ
ಸಿದ್ದರಾಮಯ್ಯ ಅವರ ಸರಕಾರ ರಾಜ್ಯದಲ್ಲಿ ಆಡಳಿ ತಕ್ಕೆ ಬಂದ ಅನಂತರ ಬಿಪಿಎಲ್‌ ಕಾರ್ಡ್‌ ಹಂಚಿಕೆ, ತನ್ಮೂಲಕ ಹತ್ತು ಹಲವು ಸೌಲಭ್ಯ, ಹೈನುಗಾರರಿಗೆ ಪ್ರೋತ್ಸಾಹ, ಉಚಿತ ವಿದ್ಯುತ್‌ ಸಂಪರ್ಕ, ವಿದ್ಯಾರ್ಥಿಗಳಿಗೆ ಕೊಡುಗೆ, ಸಮಾಜದ ಎಲ್ಲ ವರ್ಗದ ಜನರಿಗೂ ಯೋಜನೆಗಳನ್ನು ಕಲ್ಪಿಸಲಾಗಿದೆ ಎಂದು ಸಚಿವ ಪ್ರಮೋದ್‌ ಹೇಳಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾ.ಪಂ. ಸದಸ್ಯ ಸುಧೀರ್‌ ಕುಮಾರ್‌ ಶೆಟ್ಟಿ, ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ವಿಶೇಷ ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಸತೀಶ್‌ ಅಮೀನ್‌ ಪಡುಕರೆ, ಕೆಡಿಪಿ ಸದಸ್ಯ ಉಮೇಶ್‌ ನಾಯ್ಕ, ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ನಾಯಕ್‌, ಸದಸ್ಯರು ಉಪಸ್ಥಿತರಿದ್ದರು.
ವಿವಿಧ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

Advertisement

ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಿರ್ತಿ ರಾಜೇಶ್‌ ಶೆಟ್ಟಿ ಸ್ವಾಗತಿಸಿ, ನಿತ್ಯಾನಂದ ಬಿ.ಆರ್‌. ಪ್ರಸ್ತಾವನೆಗೈದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next