Advertisement

ಕೆಪಿಟಿಸಿಎಲ್‌ ಅಕ್ರಮದ ಮಾಹಿತಿ ಲಭ್ಯವಾಗಿಲ್ಲ: ಕೆಇಎ ಸ್ಪಷ್ಟನೆ

10:14 PM Aug 23, 2022 | Team Udayavani |

ಬೆಂಗಳೂರು: ಕೆಪಿಟಿಸಿಎಲ್‌ ಕಿರಿಯ ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂಥ್‌ ಉಪಯೋಗಿಸಿ ಅಕ್ರಮ ನಡೆಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.

Advertisement

ಪ್ರಾಧಿಕಾರದ ವತಿಯಿಂದ ಆ.7ರಂದು ನಡೆಸಿದ ಪರೀಕ್ಷೆಯಲ್ಲಿ ಒಂದು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್‌ ವಾಚ್‌ಅನ್ನು ಬಳಸಿ ಪ್ರಶ್ನೆಪತ್ರಿಕೆಯ ಫೋಟೋವನ್ನು ತೆಗೆದುಕೊಂಡಿದ್ದು, ಮತ್ತೊಂದು ಕೇಂದ್ರದಲ್ಲಿ ಪ್ರಾಂಶುಪಾಲರ ಮಗ ಪತ್ರಕರ್ತನ ಸೋಗಿನಲ್ಲಿ ಬಂದು ಪ್ರಶ್ನೆಪತ್ರಿಕೆಯ ಫೋಟೋ ತೆಗೆದುಕೊಂಡಿರುವುದಾಗಿ ಪೊಲೀಸ್‌ ಇಲಾಖೆಯಿಂದ ಮಾಹಿತಿ ಪಡೆಯಲಾಗಿದೆ.

ಆದರೆ, ಈ ವರೆಗೆ ಬ್ಲೂಟೂಥ್‌ ಉಪಯೋಗಿಸಿ ಪರೀಕ್ಷೆಯಲ್ಲಿ ಅಕ್ರಮವೆಸಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಧಿಕಾರವು ಆಂತರಿಕವಾಗಿ 12 ವರ್ಷನ್‌ ವಿವಿಧ ಆವೃತ್ತಿಯಲ್ಲಿ ಬಹು ಆಯ್ಕೆ ಉತ್ತರಗಳ ಮಾದರಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಲಾಗಿರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next