ಹೊಸದಿಲ್ಲಿ: ಅಮೆರಿಕ ಎಚ್-1ಬಿ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಭವಿಸುವ ಸವಾಲುಗಳನ್ನು ಎದುರಿಸಲು ಕಂಪೆನಿ ಸಿದ್ಧವಾಗಿದೆ.
ಅಮೆರಿಕದಲ್ಲಿ ಕಂಪೆನಿಗೆ ಸ್ಥಳೀಯರನ್ನೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ತಿಳಿಸಿದ್ದಾರೆ.
ಕಂಪೆನಿಯ 39ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ಅಮೆರಿಕದಲ್ಲಿ ಹೆಚ್ಚುತ್ತಿರುವ ವೀಸಾ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಸ್ಥಳೀಯರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಕಂಪೆನಿ ಆದ್ಯತೆ ನೀಡಲಿದೆ.
ಇದರಿಂದಾಗಿ ಎಚ್-1ಬಿ ವೀಸಾ ಮೇಲಿನ ಅವಲಂಬನೆ ಗಣನೀಯವಾಗಿ ಕಡಿಮೆಯಾಗಲಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಕಂಪೆನಿ 10 ಸಾವಿರಕ್ಕೂ ಹೆಚ್ಚು ಅಮೆರಿಕನ್ ಪ್ರಜೆಗಳನ್ನು ನೇಮಕ ಮಾಡಿಕೊಂಡಿದೆ.
ಪ್ರಸ್ತುತ ಅಮೆರಿಕದಲ್ಲಿ ಕಂಪೆನಿಯ ಶೇ.60ರಷ್ಟು ಉದ್ಯೋಗಿಗಳು ವೀಸಾ ಅವಲಂಬಿತರಾಗಿದ್ದಾರೆ ಎಂದು ತಿಳಿಸಿದರು.