ಹೊಸದಿಲ್ಲಿ: ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಸರ್ಕಾರ ಪರಿಗಣಿಸುತ್ತದೆ ಮತ್ತು ಇದು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.
ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡಲಿದೆ ಎಂದು ಹೇಳಿದರು.
ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಪರಿಗಣಿಸುತ್ತೇವೆ. ಈ ಮಾರ್ಗವನ್ನು ಅನುಸರಿಸುವ ಮೂಲಕ ಭಾರತವು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯನ್ನು ಸಾಧಿಸುತ್ತದೆ ಎಂದು ಮೋದಿ ಹೇಳಿದರು.
“ಯಾವುದೇ ದೇಶದ ಅಭಿವೃದ್ಧಿಯಲ್ಲಿ ಮೂಲಸೌಕರ್ಯ ಯಾವಾಗಲೂ ಮುಖ್ಯವಾಗಿದೆ. ಮೂಲಸೌಕರ್ಯಕ್ಕೆ ಸಂಬಂಧಿಸಿದ ಇತಿಹಾಸವನ್ನು ಅಧ್ಯಯನ ಮಾಡುವವರಿಗೆ ಇದು ಚೆನ್ನಾಗಿ ತಿಳಿದಿದೆ” ಎಂದು ಮೋದಿ ಅವರು ಭಾರತದ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ್ದಾರೆ.
Related Articles
ಬಡತನವು ಒಂದು ಸದ್ಗುಣ ಎಂಬ ಚಿಂತನೆಯು ದಶಕಗಳಿಂದ ಭಾರತದಲ್ಲಿ ಪ್ರಾಬಲ್ಯ ಹೊಂದಿತ್ತು ಮತ್ತು ಇದರ ಪರಿಣಾಮವಾಗಿ ಹಿಂದಿನ ಸರ್ಕಾರಗಳು ದೇಶದ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲು ಕಷ್ಟವನ್ನು ಎದುರಿಸಿದವು ಎಂದು ಮೋದಿ ಹೇಳಿದರು.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ನಿರ್ಮಾಣವಾಯ್ತು ʻವಿಶ್ವದ ಮೊದಲ ಬಿದಿರಿನ ತಡೆಗೋಡೆʼ
ನಮ್ಮ ಸರ್ಕಾರ ಆಧುನಿಕ ಮೂಲಸೌಕರ್ಯದಲ್ಲಿ ದಾಖಲೆ ಹೂಡಿಕೆ ಮಾಡುತ್ತಿದೆ. ಇದರ ಪರಿಣಾಮವಾಗಿ, ರಾಷ್ಟ್ರೀಯ ಹೆದ್ದಾರಿಗಳ ಸರಾಸರಿ ವಾರ್ಷಿಕ ನಿರ್ಮಾಣವು 2014 ರಿಂದ ಸುಮಾರು ದ್ವಿಗುಣಗೊಂಡಿದೆ ಮತ್ತು ರೈಲ್ವೆ ಮಾರ್ಗಗಳ ವಿದ್ಯುದ್ದೀಕರಣವು 600 ಕಿಲೋಮೀಟರ್ಗಳಿಂದ 4,000 ಕಿಲೋಮೀಟರ್ಗಳಿಗೆ ಹೆಚ್ಚಾಗಿದೆ.2014ರಲ್ಲಿ 74 ಇದ್ದ ವಿಮಾನ ನಿಲ್ದಾಣಗಳ ಸಂಖ್ಯೆ ಸುಮಾರು 150ಕ್ಕೆ ಏರಿದೆ ಎಂದು ಅವರು ತಿಳಿಸಿದರು.
ಪ್ರಧಾನ ಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಯೋಜನೆ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಹೇಳಿದರು.