Advertisement
ತೀವ್ರ ಸಮಸ್ಯೆ: ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತದೆ. ಗ್ರಾಮೀಣ ಅಭಿವೃದ್ಧಿಯಿಂದ ದೇಶ ಅಭಿವೃದ್ಧಿ ಸಾಧ್ಯ ಎಂದು ಎಲ್ಲಾ ಚುನಾಯಿತ ಪ್ರತಿನಿಧಿಗಳು ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುತ್ತಾರೆ. ಆದರೆ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಇಲ್ಲದೆ ಮಳೆಗಾಲದಲ್ಲಿ ಗ್ರಾಮಸ್ಥರು ಸಂಚರಿಸಲು ತೀವ್ರ ಸಮಸ್ಯೆ ಉಂಟಾಗಿದೆ.
Related Articles
Advertisement
ಅಶುದ್ಧ ನೀರಿನಿಂದ ಅನಾರೋಗ್ಯ: ಕುಡಿಯುವ ನೀರು ಅಶುದ್ಧತೆಯಿಂದ ಕೂಡಿದ್ದು, ಇದನ್ನು ಗ್ರಾಮಸ್ಥರು ಸೇವನೆ ಮಾಡುವುದರಿಂದ ವಿವಿಧ ಕಾಯಿಲೆಗಳಿಗೆ ಒಳಗಾಗುವಂತೆ ಆಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಿ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಕೆ ಆಗಬೇಕಾಗಿದೆ.
ಗ್ರಾಮಕ್ಕೆ ಸುರಕ್ಷಿತವಾದ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲು ನರೇಗಾ ಯೋಜನೆಯಡಿಯಲ್ಲಿ ಕ್ರಿಯಾಯೋಜನೆ ತಯಾರಿಸಿದ್ದು, ಕೂಲಿ ಆಳುಗಳಿಂದ ಉದ್ಯೋಗ ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಶೀಘ್ರದಲ್ಲಿಯೇ ಸುರಕ್ಷಿತವಾದ ರಸ್ತೆ ಮತ್ತು ಚರಂಡಿ ಕಾಮಗಾರಿ ಆರಂಭವಾಗಲಿದೆ.-ರಂಗರಾಜು, ಅಭಿವೃದ್ಧಿ ಅಧಿಕಾರಿ, ತಿಮ್ಮರಾಜೀಪುರ ಗ್ರಾಪಂ, ಜಕ್ಕಹಳ್ಳಿ ಗ್ರಾಮದಲ್ಲಿ ಚರಂಡಿ ಮತ್ತು ರಸ್ತೆ ಕೊರತೆಯಿಂದಾಗಿ ಜನರಿಗೆ ಸಂಕಷ್ಟ ಎದುರಾಗಿದ್ದು, ಕೂಡಲೇ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ಅಭಿವೃದ್ಧಿ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗುವುದು.
-ಶ್ರೀನಿವಾಸ್, ತಾಪಂ ಇಒ * ಡಿ.ನಟರಾಜು