ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Advertisement
ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಬಾಕಿ ಉಳಿದಿರುವ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.
Related Articles
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಂತಿಮ ಹಂತದಲ್ಲಿರುವಂತಹ ಕಾಮಗಾರಿ ಗಳನ್ನು ತುರ್ತಾಗಿ ಒಂದು ವಾರದೊ ಳಗೆ ಪೂರ್ಣಗೊಳಿಸಬೇಕು ಮತ್ತು ಕೆಆರ್‌ಐಡಿಸಿಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲಿಕರಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗೆ ತಿಳಿಸಿದರು. ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಮನೆ ಪಡೆದುಕೊಳ್ಳುತ್ತಿ ರುವ ಅರ್ಹ ಫಲಾನುಭವಿಗಳಿಗೆ ವಿಶೇಷ ಶಿಬಿರ ಆಯೋಜಿಸಿ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಹೊಂದುವಂತೆ ಉಪ ವಿಭಾಗಾಧಿಕಾರಿತಿಳಿಸಿದರು.
Advertisement