Advertisement

ಮುನ್ನೆಚ್ಚರಿಕೆ ಡೋಸ್‌ ಲಸಿಕಾಕರಣಕ್ಕೆ ಚಾಲನೆ

06:10 PM Jan 13, 2022 | Team Udayavani |

ರಾಮದುರ್ಗ: ತಾಲೂಕು ಆಡಳಿತ ಸದೃಢವಾಗಿದ್ದರೆ ತಾಲೂಕು ಸದೃಢವಾಗುತ್ತದೆ. ಈ ನಿಟ್ಟಿನಲ್ಲಿ ಫ್ರಂಟ್‌ ಲೈನ್‌ ವಾರಿಯರ್ ಮುನ್ನೆಚ್ಚರಿಕೆ ಡೋಸ್‌ ಪಡೆದು ಕೊರೊನಾ ವಿರುದ್ಧದ ಅಭಿಯಾನ ಮುಂದುವರಿಸಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

Advertisement

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕೋವಿಡ್‌ ಮುನ್ನೆಚ್ಚರಿಕೆ ಕ್ರಮವಾಗಿ 60 ವರ್ಷ ಮೇಲ್ಪಟ್ಟವರಿಗೆ ನೀಡುವ ಮುನ್ನೆಚ್ಚರಿಕೆ ಡೋಸ್‌ ಲಸಿಕಾಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‌ 3ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸೇರಿದಂತೆ ಹಲವು ಸಚಿವರಿಗೆ ಸೋಂಕು ಅಂಟಿಕೊಳ್ಳುತ್ತಿದೆ. ಎರಡನೇ ಲಸಿಕೆ ಪಡೆದು 9 ತಿಂಗಳು ನಂತರದ 60 ವರ್ಷ ಮೇಲ್ಪಟ್ಟ ವಯಸ್ಕರು ಮುನ್ನೆಚ್ಚರಿಕೆ ಡೋಸ್‌ ಲಸಿಕೆ ಪಡೆಯಬೇಕು ಎಂದರು. ತಹಶೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ಸರ್ಕಾರದ ಆದೇಶದನ್ವಯ 60 ವರ್ಷದ ವೃದ್ಧರು ಲಸಿಕೆ ಪಡೆದು ಹೆಚ್ಚು ಸುರಕ್ಷಿತವಾಗಿ ಇರಬೇಕೆಂದು ಹೇಳಿದರು.

ತಾಪಂ ಇಒ ಪ್ರವೀಣಕುಮಾರ ಸಾಲಿ ಸ್ವತಃ ಮುನ್ನೆಚ್ಚರಿಕೆ ಡೋಸ್‌ ಲಸಿಕೆ ಪಡೆದುಕೊಂಡು ಅಭಿಯಾನಕ್ಕೆ ಚಾಲನೆ ನೀಡಿಡರು. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ಪೋತದಾರ, ಮುಖ್ಯ ವೈದ್ಯಾಧಿಕಾರಿ ಡಾ| ನಿರ್ಮಲಾ ಹಂಜಿ, ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಪಟ್ಟಣಶೆಟ್ಟಿ ಇತರರಿದ್ದರು. ಎಸ್‌.ಡಿ. ಐನಾಪೂರ ಸ್ವಾಗತಿಸಿ, ವಂದಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next