Advertisement

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

09:05 PM Apr 13, 2024 | Team Udayavani |

ಗದಗ: ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯವಾಗಿದೆ ಎಂದು ವಚನಾನಂದ ಶ್ರೀಗಳು ಹೇಳಿದರು.
ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮಾಜಕ್ಕೆ ಕೇವಲ ಒಂದೇ ಟಿಕೆಟ್‌ ನೀಡಿದ್ದು, ಅನ್ಯಾಯ ಅಲ್ಲವೇ..? ಪಂಚಮಸಾಲಿ ಸಮಾಜವನ್ನು ರಾಜಕೀಯ ದಾಳವನ್ನಾಗಿ ಉಪಯೋಗಿಸಿಕೊಂಡಿದ್ದು, ಸಮಾಜದ ಜನಪ್ರತಿನಿಧಿಗಳಿಗೆ ಯಾವುದೇ ಪ್ರಮುಖ ಹುದ್ದೆಗಳನ್ನು ನೀಡದೆ ಅನ್ಯಾಯ ಮಾಡಿದೆ. ಈ ಅನ್ಯಾಯವನ್ನು ಇನ್ನೆಷ್ಟು ದಿನಗಳ ಕಾಲ ಸಹಿಸಿಕೊಳ್ಳುವುದು ಎಂದು ಪ್ರಶ್ನಿಸಿದರು.

Advertisement

ಎಲ್ಲ ಚುನಾವಣೆಗಳಿಗೂ ಪಂಚಮಸಾಲಿ ಸಮಾಜವನ್ನು ಬಳಸಿಕೊಳ್ಳುತ್ತಾರೆ. ಮುಗಿದ ಬಳಿಕ ಪಕ್ಕಕ್ಕೆ ಸರಿಸುತ್ತಾರೆ. ಈ ಹಿಂದಿನ ರಾಜ್ಯ ಸರ್ಕಾರ 2ಎ ಮೀಸಲಾತಿ ಘೋಷಣೆ ಮಾಡಿದರೂ ಅದು ಕೋರ್ಟ್‌ ಅಂಗಳ ತಲುಪಿದೆ. ಇದಕ್ಕಾಗಿ ಕಾನೂನು ಹೋರಾಟ ಮಾಡುತ್ತಿದ್ದೇವೆ. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಪಂಚಮಸಾಲಿ ಸಮಾಜ ಸೇರ್ಪಡೆಗೊಂಡರೆ ಮಾತ್ರ ಸಮಾಜದ ಜನರು ಮುಂದುವರಿಯಲು ಸಾಧ್ಯ. ಸಮಾಜಕ್ಕೆ ಒಬಿಸಿ ನಿಲುವನ್ನು ಗಟ್ಟಿಯಾಗಿ ಪ್ರತಿಪಾದನೆ ಮಾಡುವವರನ್ನು ಮಾತ್ರ ಈ ಚುನಾವಣೆಯಲ್ಲಿ ಬೆಂಬಲಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

ಉತ್ತರ ಭಾರತದಲ್ಲಿ ಸನ್ಯಾಸಿಗಳು, ಸಾಧು ಸಂತರು ರಾಜಕೀಯ ಶುದ್ಧೀಕರಣಕ್ಕಾಗಿ ರಾಜಕೀಯಕ್ಕೆ ಬರುವುದರಲ್ಲಿ ತಪ್ಪಿಲ್ಲ.
ಅದೇ ರೀತಿ, ದಕ್ಷಿಣದಲ್ಲಿ ದಿಂಗಾಲೇಶ್ವರ ಶ್ರೀಗಳು ರಾಜಕೀಯ ಶುದ್ಧೀಕರಣಕ್ಕೆ ಬಂದಿದ್ದು, ನಾವು ಸ್ವಾಗತಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next