Advertisement
ಬುಧವಾರ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಹಾಗೂ ಬರ ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಕೇಂದ್ರದ ತಾರತಮ್ಯ ಧೋರಣೆ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಉದ್ಯೋಗ ಖಾತರಿ ಯೋಜನೆಯಡಿ ಈ ವರ್ಷ ಕೂಲಿ ಖಾತೆ ಹಾಗೂ ಪೂರಕ ಸಲಕರಣೆ ಖಾತೆಗೆ ಒಟ್ಟು 850 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಈವರೆಗೆ ಪಾವತಿಸಿಲ್ಲ. ಕಾಲಮಿತಿಯಲ್ಲಿ ಪಾವತಿಸಬೇಕೆಂಬ ಕಾನೂನಿದ್ದರೂ ಪಾಲನೆಯಾಗುತ್ತಿಲ್ಲ. ಹಾಗಿದ್ದರೂ ವಿನಾಕಾರಣ ರಾಜ್ಯ ಸರ್ಕಾರ ಹಣ ಪಾವತಿಸದೆ ತಡೆ ಹಿಡಿಯುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ ಎಂದು ದೂರಿದರು. ಕೇಂದ್ರ ಸರ್ಕಾರವು ಬರ ಪರಿಹಾರ ವಿತರಣೆಯಲ್ಲೂ ತಾರತಮ್ಯ ತೋರಿದೆ. ಕೇಂದ್ರವು ಮಹಾರಾಷ್ಟ್ರಕ್ಕೆ ಸುಮಾರು 4,200 ಕೋಟಿ ರೂ.ಪರಿಹಾರ ಘೋಷಿಸಿದ್ದರೆ ತೀವ್ರ ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ 949 ಕೋಟಿ ರೂ.ಪರಿಹಾರ ಘೋಷಿಸಿದೆ. ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು Advertisement
ಬರ ಪರಿಹಾರ ವಿತರಣೆಯಲ್ಲಿ ಕೇಂದ್ರದಿಂದ ಅನ್ಯಾಯ
12:30 AM Jan 31, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.