Advertisement
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024ರ ಮೇಲಿನ ಸದಸ್ಯರ ಸಲಹೆ ಮತ್ತು ಅಭಿಪ್ರಾಯಗಳಿಗೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ ತಂಗಡಗಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಆದರೆ ಅದರ ಅಭಿವೃದ್ಧಿಗೆ ಇದುವರೆಗೆ ಅನುದಾನ ಬಂದಿಲ್ಲ. ಪಕ್ಕದ ತಮಿಳುನಾಡಿಗೆ ಭಾಷಾ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಂದಿದೆ. ಈ ವಿಚಾರದಲ್ಲಿ ಕೇಂದ್ರ ಸರಕಾರ ಮೂಗಿಗೆ ತುಪ್ಪ ಸವರಿದೆ. ತೆರಿಗೆ ಅನುದಾನ ಹಂಚಿಕೆಯಲ್ಲಿ ಮಾತ್ರವಲ್ಲ; ಕನ್ನಡ ಅಭಿವೃದ್ಧಿ ವಿಚಾರದಲ್ಲೂ ಕರ್ನಾಟಕ ಅನ್ಯಾಯಕ್ಕೆ ಒಳಗಾಗುತ್ತಾ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
Related Articles
Advertisement
ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ಮುಂದುವರಿದು ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು.
ವಸತಿ ನಿಲಯಗಳಲ್ಲಿ ಮಹಿಳಾ ವಾಚ್‌ಮನ್ ನೇಮಕಹಿಂದುಳಿದ ವರ್ಗದ ಸಮುದಾಯದ ಮಕ್ಕಳ ಕಲಿಕೆಗಾಗಿ ಜಿಲ್ಲಾ ಕೇಂದ್ರಗಳಲ್ಲಿ 150 ವಸತಿ ನಿಲಯಗಳನ್ನು ನಿರ್ಮಾಣ ಮಾಡಲು ಸರಕಾರ ಮುಂದಾಗಿದೆ. ಜತೆಗೆ ವಸತಿ ನಿಲಯಗಳಲ್ಲಿ ಮಹಿಳಾ ವಾಚ್ ಮನ್‌ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಕನ್ನಡ ಪರ ಹೋರಾಟಗಾರರ ಕೇಸು ಹಿಂಪಡೆಯಲು ಸಿಎಂ, ಗೃಹ ಸಚಿವರ ಜತೆ ಚರ್ಚೆ
ಬೆಂಗಳೂರು: ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯಲು ಮುಖ್ಯಮಂತ್ರಿ ಮತ್ತು ಗೃಹ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ಭರವಸೆ ನೀಡಿದರು. ಮಸೂದೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಪ್ರತಿಭಟನೆ ವೇಳೆ ಕನ್ನಡಪರ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡರು ಎಂದೂ ಹೇಳಲಾಗುತ್ತಿದೆ. ಆದರೆ ಕನ್ನಡಪರವಾಗಿ ಅವರು ಹೋರಾಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣಗಳನ್ನು ಹಿಂಪಡೆಯುವ ಅಗತ್ಯ ಇದ್ದು, ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಗಮನಕ್ಕೆ ತಂದು ಮನವೊಲಿಸಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ ಪಕ್ಷಾತೀತವಾಗಿ ಮೇಲ್ಮನೆ ಸದಸ್ಯರು ಕನ್ನಡಪರ ಹೋರಾಟಗಾರರ ಪರ ದನಿ ಎತ್ತಿದರು.