Advertisement
ಮಂಗಳವಾರ ಬೆಳಗ್ಗೆ ಕಲಾಪ ಆರಂಭ ಆಗುತ್ತಿದ್ದಂತೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಕಾಶ ಮಾಡಿಕೊಟ್ಟರು. ಅರ್ಧದಿನದ ಕಲಾಪವನ್ನು ತಮ್ಮ ಉತ್ತರಕ್ಕಾಗಿ ಬಳಸಿಕೊಂಡ ಸಿಎಂ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ, ಪ್ರಧಾನಿ ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ ಕೇಂದ್ರ ಸರಕಾರದ ವಿರುದ್ಧ ನಡೆಸಿದ್ದ ವಾಗ್ಧಾಳಿ, ತಮ್ಮ ಸರಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಸ್ತೃತ ಪ್ರಸ್ತಾವ ಮಾಡಿದರು.
ರಾಜ್ಯಪಾಲರ ಭಾಷಣದ ಮೂಲಕ ಸುಳ್ಳು ಹೇಳಿಸಿರುವುದಾಗಿ ವಿಪಕ್ಷಗಳು ಆರೋಪಿಸಿವೆ. ಆದರೆ ಸರಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ನಾವು ಅಧಿಕಾರಕ್ಕೆ ಬಂದ 9 ತಿಂಗಳು ಗಳಲ್ಲಿ 77,000 ಕೋಟಿ ರೂ. ಬಂಡವಾಳ ಹೂಡಿಕೆ ಯಾಗಿದೆ. ಇದು ನಮ್ಮ ಆಡಳಿತ ಹಾಗೂ ಕಾನೂನು ಸುವ್ಯವಸ್ಥೆಗೆ ಹಿಡಿದ ಕನ್ನಡಿ.
Related Articles
Advertisement
ನಮ್ಮ ಪಾಲು ಕೇಳುವುದು ತಪ್ಪಾ?ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಪ್ರಧಾನಿಯಿಂದ ಹಿಡಿದು ಕೇಂದ್ರದ ವಿವಿಧ ಸಚಿವರು, ಇಲಾಖೆಯ ಅಧಿಕಾರಿಗಳಿಗೆ ಪರಿಹಾರ ಕೇಳಿ 17 ಬಾರಿ ಪತ್ರ ಬರೆಯಲಾಗಿದೆ. ನಿಮ್ಮ ಪತ್ರ ತಲುಪಿದೆ ಎಂದು ಒಂದು ಪತ್ರಕ್ಕೆ ಮಾತ್ರ ಉತ್ತರ ಬಂದಿದೆ. ಉಳಿದ ಪತ್ರಗಳಿಗೆ ಉತ್ತರವೂ ಬಂದಿಲ್ಲ, ಬರ ಪರಿಹಾರವೂ ಸಿಕ್ಕಿಲ್ಲ. ಇದು ಸುಳ್ಳಾ? ಇದನ್ನು ಪ್ರಶ್ನಿಸುವುದಾ ತಪ್ಪಾ? ನರೇಗಾ ಅಡಿ 150 ಮಾನವ ದಿನಗಳನ್ನು ಸೃಷ್ಟಿಸಿ ಎಂದು ಮನವಿ ಮಾಡಿದರೂ ಸ್ಪಂದಿಸಿಲ್ಲ. 34 ರೂ.ಗಳಿಗೆ ಕೆ.ಜಿ. ಅಕ್ಕಿ ಕೊಡಿ ಎಂದು ಕೇಳಿದರೂ ಕೊಡದ ಕೇಂದ್ರ ಸರಕಾರ ಈಗ 29 ರೂ.ಗಳಿಗೆ ಮಾರುತ್ತಿದೆ. ಇದು ಸರಿಯೇ ಎಂದು ಸಿಎಂ ಪ್ರಶ್ನಿಸಿದರು.
15ನೇ ಹಣಕಾಸು ಆಯೋಗ ರಾಜ್ಯಕ್ಕೆ ಒಟ್ಟು 11,495 ಕೋಟಿ ರೂ. ನೀಡಲು ಶಿಫಾರಸು ಮಾಡಿತ್ತು. ಅದನ್ನು ತನ್ನಿ ಎಂದು ಹಿಂದಿನ ಸರಕಾರಕ್ಕೂ ಹೇಳಿದ್ದೆ. ಮಧ್ಯಂತರ ವರದಿಯಲ್ಲಿ ಉಲ್ಲೇಖೀಸಿದ್ದ ವಿಶೇಷ ಅನುದಾನ 5,495 ಕೋಟಿ ರೂ.ಗಳನ್ನು ಅಂತಿಮ ವರದಿಯಲ್ಲಿ ಕೈಬಿಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5,300 ಕೋಟಿ ರೂ.ಗಳಲ್ಲಿ ಬಿಡಿಗಾಸೂ ಬಿಡುಗಡೆಯಾಗಿಲ್ಲ. ಇದನ್ನು ಪ್ರಶ್ನಿಸುವುದು ತಪ್ಪಾ? ಇದನ್ನು ಕೇಂದ್ರ ಸರಕಾರದ ವಿರುದ್ಧ ಸಂಘರ್ಷಕ್ಕಿಳಿದಿದ್ದೇವೆ ಎಂದು ವ್ಯಾಖ್ಯಾನಿಸಿದರೆ ಹೇಗೆ ಎಂದು ಪ್ರಶ್ನಿಸಿದರು.
ಡಿ.ಕೆ. ಸುರೇಶ್ ಹೇಳಿಕೆಗೆ ಸಮರ್ಥನೆಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಶೇ. 50ರಷ್ಟು ತೆರಿಗೆ ಪಾಲು ನೀಡುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದರು. ಈಗ ರಾಜ್ಯದಿಂದ 4.30 ಲಕ್ಷ ಕೋಟಿ ರೂ. ಸಂದಾಯವಾದರೆ 50 ಸಾವಿರ ಕೋಟಿ ರೂ. ಕೂಡ ಹಿಂದಿರುಗಿ ಬರುತ್ತಿಲ್ಲ. ಈ ಅನ್ಯಾಯಗಳ ಬಗ್ಗೆ ಸಂಸದರು ಬಾಯಿ ಬಿಡುವುದೇ ಇಲ್ಲ. ಇಲ್ಲಿ ನಮಗೆ ಅನ್ಯಾಯ ಆಗುತ್ತಿರುವುದನ್ನು ಸಂಸದ ಡಿ.ಕೆ. ಸುರೇಶ್ ಪ್ರಶ್ನಿಸಿದರೆ ದೇಶ ವಿಭಜನೆ ಎಂದು ಬಿಜೆಪಿಯವರು ಬಿಂಬಿಸಿದರು ಎಂದು ಸಿಎಂ ಹೇಳಿದರು. ಇದಕ್ಕೆ ಸಚಿವ ಜಮೀರ್ ಖಾನ್ ಧ್ವನಿಗೂಡಿಸಿ ಬಿಜೆಪಿಯ 25 ಸಂಸದರಿದ್ದಾರೆ, ಅವರು ಬಾಯಿ ಬಿಡಬೇಕು ಎಂದು ಕೆಣಕಿದರು. ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಏಕೆ ಪ್ರಶ್ನಿಸುವುದಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ತಿರುಗೇಟು ಕೊಟ್ಟರು. ರಾಜ್ಯಪಾಲರ ಬಾಯಿ
ಯಿಂದ ಹೇಳಿಸಿರುವ ಸುಳ್ಳು ಗಳನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಸರಕಾರ ಅತ್ಯಂತ ನೀಚ ಮಟ್ಟಕ್ಕೆ ಇಳಿದಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಇಂತಹ ಉತ್ತರವನ್ನು ಸಿಎಂ ಅವರಿಂದ ನಿರೀಕ್ಷಿಸಿರಲಿಲ್ಲ. ಇದನ್ನು ವಿರೋಧಿಸಿ ನಾವು ಸಭಾತ್ಯಾಗ ಮಾಡಿದ್ದೇವೆ.
-ಆರ್. ಅಶೋಕ್, ವಿಪಕ್ಷ ನಾಯಕ ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ ಎತ್ತುತ್ತೇವೆ. ರಾಜ್ಯಸಭೆ ಯಲ್ಲಿ ಮೇಕೆದಾಟು ವಿಷಯದಲ್ಲಿ ದೇವೇ ಗೌಡರು ಮಾತನಾಡಿ ದಾಗ ಕಾಂಗ್ರೆಸ್ ಸದಸ್ಯರು ಯಾಕೆ ಬೆಂಬಲ ಕೊಡಲಿಲ್ಲ? ಮಲ್ಲಿಕಾರ್ಜುನ ಖರ್ಗೆ ಏಕೆ ಮಾತನಾಡಲಿಲ್ಲ?
-ಕುಮಾರಸ್ವಾಮಿ, ಜೆಡಿಎಸ್ ನಾಯಕ