Advertisement

ಕಾಂಗ್ರೆಸ್‌ನಿಂದ ರೈತರಿಗೆ ಅನ್ಯಾಯ: ಎಚ್‌ಡಿಕ

04:39 PM Feb 27, 2018 | |

ಕೆಂಭಾವಿ: ಮಂಗಳವಾರ ಶಹಾಪುರ ಪಟ್ಟಣದಲ್ಲಿ ನಡೆಯುವ ಜೆಡಿಎಸ್‌ ಸಮಾವೇಶದ ಪೂರ್ವಭಾವಿಯಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪಟ್ಟಣದ ಭೋಗೇಶ್ವರ ದೇವಸ್ಥಾನ ಹಾಗೂ ಹಜರತ್‌ ಚಚ್ಚಾ ಮಾಸಬಿ ದರ್ಗಾಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Advertisement

ನಂತರ ಮಾತನಾಡಿದ ಅವರು, ಹೈ.ಕ ಜಿಲ್ಲೆಗಳು ಹಿಂದುಳಿಯಲು ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿ ಪ್ರಮುಖ ಕಾರಣವಾಗಿದ್ದು, ಈ ಭಾಗದ ರೈತರಿಗೆ, ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಅನ್ಯಾಯ ಮಾಡಿದೆ ಆರೋಪಿಸಿದರು.

ನಮ್ಮ ತಂದೆ ಮಾಜಿ ಪ್ರಧಾನಿ ದೇವೇಗೌಡ ಅವರ ಅಧಿಕಾರ ಅವಧಿಯಲ್ಲಿ ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ
ನಾರಾಯಣಪುರ ಎಡದಂಡೆ ಕಾಲುವೆ ನಿರ್ಮಿಸುವ ಮೂಲಕ ಈ ಭಾಗದಲ್ಲಿ ನೀರಾವರಿಗೆ ಆದ್ಯತೆ ನೀಡಿದ್ದಾರೆ ಎಂದ ಅವರು, ಅವರ ಸಂಪೂರ್ಣ ಬೆಂಬಲದಿಂದ ಈ ಬಾರಿ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ರಾಜ್ಯಕ್ಕೆ ಘೋರ ಅನ್ಯಾಯ ಮಾಡಿದ್ದು, ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದು ಮತ್ತು ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡಲಾಗುವುದು ಎಂದು ಹೇಳಿದ ಅವರು, ಶಹಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಯುವ ಮುಖಂಡ ಅಮೀನರೆಡ್ಡಿ ಯಾಳಗಿ ಉತ್ಸಾಹಿ ಯುವಕರಾಗಿದ್ದು, ಮುಂದಿನ ಚುನಾವಣೆಯಲ್ಲಿ ಆಯ್ಕೆ ಮಾಡಿ
ಕಳಿಸುವಂತೆ ಮನವಿ ಮಾಡಿದರು.

Advertisement

ಜೆಡಿಎಸ್‌ ಅಭ್ಯರ್ಥಿ ಅಮೀನರೆಡ್ಡಿ ಪಾಟೀಲ, ಶ್ರೀನಿವಾಸ ರೆಡ್ಡಿ ಪಾಟೀಲ, ಅಕ್ಬರ್‌ ನಾಲತವಾಡ ಸೇರಿದಂತೆ ಪಕ್ಷದ ಹಲವು ಮುಖಂಡರು, ಕಾರ್ಯಕರ್ತರು ಇದ್ದರು.  

Advertisement

Udayavani is now on Telegram. Click here to join our channel and stay updated with the latest news.

Next