Advertisement
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್‌ನಿಂದ ಯಾವುದೇ ನೋಟಿಸ್ ಬಂದಿಲ್ಲ. ಸಿದ್ದರಾಮಯ್ಯ ಜತೆ ನಡೆಸಿರುವ, ಮುಂದೆ ನಡೆಸುವ ಮಾತುಕತೆಯ ಬಗ್ಗೆ ಬಹಿರಂಗವಾಗಲಿ ಇಲ್ಲವೇ ಮಾಧ್ಯಮಗಳಲ್ಲಿ ಹೇಳುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದರು.
ಲಿಂಗಾಯತ ಸಮುದಾಯದ ಅಧಿಕಾರಿಗಳ ಪಟ್ಟಿ ಬಿಡುಗಡೆ ಕುರಿತಂತೆ ಕೇಳಲಾದ ಪ್ರಶ್ನೆಗೆ, ಹುಚ್ಚುಚ್ಚು ಪ್ರಶ್ನೆ ಕೇಳಬೇಡಿ. ನಾನು ಸರ್ಕಾರದ ವಿರುದ್ಧ ಯಾವುದೇ ಬಾಂಬ್ ಹಾಕಿಲ್ಲ ಎಂದು ಗರಂ ಆದರು. ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಿಲ್ಲ ಎಂಬುದಾಗಿ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರು(ಎಸ್.ಎಸ್. ಮಲ್ಲಿಕಾರ್ಜುನ್) ಹೇಳಿದ ಮೇಲೆ ಎಲ್ಲಾ ಮುಗಿಯಿತು. ಮತ್ತೇನು ಇಲ್ಲ ಎಂದರು.
Related Articles
Advertisement