Advertisement

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

11:53 PM Apr 24, 2024 | Team Udayavani |

ಬೆಂಗಳೂರು: ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸು ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗಿದ್ದಾರೆ ಎಂದು ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಹಿಂದುಳಿದ ವರ್ಗಗಳ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡು, ಅದನ್ನು ಮುಸ್ಲಿಮರಿಗೆ ಹಂಚುವ ಕುತ್ಸಿತ ಹಾಗೂ ತುಷ್ಟೀಕರಣ ರಾಜಕಾರಣದ ಸಂಚು ಇದರಲ್ಲಿ ಅಡಗಿದೆ. ಹಿಂದುಳಿದ ವರ್ಗಗಳ ಹಿತಾಸಕ್ತಿ ರಕ್ಷಣೆಯ ಚಾಂಪಿಯನ್‌ ತಾನೆಂದು ಸ್ವಯಂ ಘೋಷಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಒಬಿಸಿ ಸಮುದಾಯಕ್ಕಿಂತ ಮುಸ್ಲಿಂ ಓಲೈಕೆಯೇ ಮುಖ್ಯ ಎಂಬುದು ಇದರಿಂದ ಸಾಬೀತಾಗಿದೆ ಎಂದು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next